pashupathi
ಕರಾವಳಿ

ಪ್ರವಾಸಿ ಬೋಟ್ ಪಲ್ಟಿ: ಇನ್ನೂ ಪತ್ತೆಯಾಗದ ರೈಡರ್..!!

tv clinic
ತ್ರಾಸಿ ಬೀಚ್‌ನಲ್ಲಿ ಬೋಟ್ ಪಲ್ಟಿಯಾಗಿ (Boat Drowned) ರೈಡರ್ ಕಣ್ಮರೆಯಾಗಿರುವ ಘಟನೆ ವರದಿಯಾಗಿದೆ. ಬೋಟ್‌ನಲ್ಲಿದ್ದ ಪ್ರವಾಸಿಗನನ್ನು ರಕ್ಷಿಸಲಾಗಿದ್ದು ಕಣ್ಮರೆಯಾಗಿರುವ ರೈಡರ್‌ಗಾಗಿ ಭಾರೀ ಶೋಧ ಕಾರ್ಯ ನಡೆಸಲಾಗುತ್ತಿದೆ. 

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ :ತ್ರಾಸಿ ಬೀಚ್‌ನಲ್ಲಿ ಬೋಟ್ ಪಲ್ಟಿಯಾಗಿ (Boat Drowned) ರೈಡರ್ ಕಣ್ಮರೆಯಾಗಿರುವ ಘಟನೆ ವರದಿಯಾಗಿದೆ. ಬೋಟ್‌ನಲ್ಲಿದ್ದ ಪ್ರವಾಸಿಗನನ್ನು ರಕ್ಷಿಸಲಾಗಿದ್ದು ಕಣ್ಮರೆಯಾಗಿರುವ ರೈಡರ್‌ಗಾಗಿ ಭಾರೀ ಶೋಧ ಕಾರ್ಯ ನಡೆಸಲಾಗುತ್ತಿದೆ. ಇನ್ನು ನಾಪತ್ತೆಯಾದ ರೈಡರ್‌ನನ್ನು ರವಿದಾಸ್ ಎಂದು ಗುರುತಿಸಲಾಗಿದೆ.

akshaya college

ತ್ರಾಸಿ(trasi) ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್ನ ಜೆಟ್‌ಸ್ಟೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕಿ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಲಾಗಿದೆ.

ಬೆಂಗಳೂರು ಮೂಲದ ಪ್ರವಾಸಿಗ ಪ್ರಶಾಂತ್ ಎಂಬವರು ಟೂರಿಸ್ಟ್ ಬೋಟಿನಲ್ಲಿ ಬೋಟಿಂಗ್ ನಡೆಸುತ್ತಿರುವಾಗ ಬೋಟ್ ಪಲ್ಟಿ ಆದ ಪರಿಣಾಮ ಪ್ರವಾಸಿಗ ಹಾಗೂ ರೈಡರ್ ಇಬ್ಬರೂ ನೀರಿಗೆ ಬಿದ್ದ ಪರಿಣಾಮ ರೈಡ‌ರ್ ನಾಪತ್ತೆಯಾಗಿದ್ದಾರೆ. ಲೈಫ್ ಜಾಕೆಟ್ ಧರಿಸಿದ್ದ ಪರಿಣಾಮ ಪ್ರವಾಸಿಗ ಪ್ರಶಾಂತ್ ಬಚಾವ್ ಆಗಿದ್ದಾರೆ.

ಮುರುಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು ಜೆಟ್‌ ಸ್ಕಿ ಮತ್ತಿತರ ಬೋಟ್ ರೈಡ್ ಕಾಯಕ ಮಾಡಿಕೊಂಡಿದ್ದರು. ನಾಪತ್ತೆಯಾದ ರವಿದಾಸ್ ನ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…