ಕರಾವಳಿ

ಉಡುಪಿ: ಟಯರ್‌ಗೆ ಗಾಳಿ ತುಂಬಿಸುವ ವೇಳೆ ಸ್ಫೋಟ; ಯುವಕನಿಗೆ ಗಂಭೀರ.!

ಗಾಳಿ ತುಂಬುವಾಗ ಟಯರ್(tyre) ಸ್ಪೋಟಗೊಂಡು ಯುವಕ ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಗಾಯಗೊಂಡ ಯುವಕನನ್ನು ಅಬ್ದುಲ್ ರಜೀದ್ (19) ಎಂದು ಗುರುತಿಸಲಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: (udupi)ಗಾಳಿ ತುಂಬುವಾಗ ಟಯರ್(tyre) ಸ್ಪೋಟಗೊಂಡು ಯುವಕ ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಗಾಯಗೊಂಡ ಯುವಕನನ್ನು ಅಬ್ದುಲ್ ರಜೀದ್ (19) ಎಂದು ಗುರುತಿಸಲಾಗಿದೆ.

akshaya college

ಕೆಪಿಎಸ್ ಪಿಯು ಕಾಲೇಜ್(kps pu college) ಹಿಂಭಾಗದಲ್ಲಿನ ಟಯ‌ರ್ ಪಂಚರ್ ಶಾಪ್‌ನಲ್ಲಿ ಬಸ್‌ನ ಟೈಯರಿಗೆ ಗಾಳಿ ತುಂಬುವ ಸಂದರ್ಭ ಟಯ‌ರ್ ಸಿಡಿದಿದೆ.

ಖಾಸಗಿ ಶಾಲೆ ಬಸೊಂದರ ಟಯರ್ ಪ್ಯಾಚ್‌ಗೆಂದು ಬಂದಿದ್ದು, ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ ಟೈಯ‌ರ್ ಸಿಡಿದಿದೆ. ಗಾಳಿ ತುಂಬಿಸುತ್ತಿದ್ದ ಯುವಕ ಎದ್ದು ನಿಲ್ಲುವಷ್ಟರಲ್ಲಿ ಸ್ಪೋಟ ಸಂಭವಿಸಿದ್ದು, ಟಯರ್‌ನ ಸಿಡಿತಕ್ಕೆ ಸುಮಾರು ಕೆಲವು ಅಡಿ ಎತ್ತರಕ್ಕೆ ಯುವಕ ಎಸೆಯಲ್ಪಟ್ಟಿದ್ದಾನೆ.

ಅಪಘಾತದ ಹೊಡೆತಕ್ಕೆ ಯುವಕನ ಕೈ ಮುರಿತ ಉಂಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎರಡೇ ದಿನದಲ್ಲಿ ಬಯಲಾದ ರಸ್ತೆ ಕಾಮಗಾರಿಯ ಅಸಲಿ ಮುಖ | ಅವೈಜ್ಞಾನಿಕ, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಪುತ್ತಿಲ ಆಕ್ರೋಶ

ಪುತ್ತೂರು: ಕಾಮಗಾರಿ ನಡೆದ ರಸ್ತೆ ವಾಹನ ಸಂಚಾರಕ್ಕೆ ತೆರೆದುಕೊಂಡ ಎರಡೇ ದಿನದಲ್ಲಿ ಕಿತ್ತು…

ಸೆ. 7 – 9: ಯುವಜನರ ನಡಿಗೆ ಉದ್ಯೋಗದ ಕಡೆಗೆ ಡಿವೈಎಫ್ಐನಿಂದ ಯುವಜನ ಜಾಥಾ | ಪುತ್ತೂರು ಸಹಿತ ಜಿಲ್ಲಾದ್ಯಂತ ಸಂಚರಿಸಲಿದೆ ಜಾಥಾ

ಪುತ್ತೂರು: ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯುವಜನರ ನಡಿಗೆ ಉದ್ಯೋಗದ ಕಡೆಗೆ…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…