tamanvi
ಕರಾವಳಿ

ಶಾಲೆಯಲ್ಲಿ ಜೇನು ನೊಣ ದಾಳಿ:  40ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ!!

ಹೆಚ್ಚೇನು ಕಡಿದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಗರದ ವಳಕಾಡು ಶಾಲಾ ಆವರಣದಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಹೆಚ್ಚೇನು ಕಡಿದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಗರದ ವಳಕಾಡು ಶಾಲಾ ಆವರಣದಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ.

ಗಾಯಗೊಂಡ 41 ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿದ್ದು, ಇದರಲ್ಲಿ ಮೂರು ಮಕ್ಕಳನ್ನು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿಕೊಳ್ಳಲಾಗಿದೆ. ಓರ್ವ ಪೋಷಕರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಮಕ್ಕಳು ಹೊರರೋಗಿಯಾಗಿ ಚಿಕಿತ್ಸೆ ಪಡೆದು ಕೊಂಡಿದ್ದಾರೆ ಎಂದು ಜಿಲ್ಲಾ ಸರ್ಜನ್ ಡಾ.ಅಶೋಕ್ ಕುಮಾ‌ರ್ ತಿಳಿಸಿದ್ದಾರೆ.

ಶಾಲಾ ಆವರಣದಲ್ಲಿ ಆಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ, ಕಟ್ಟಡದಲ್ಲಿದ್ದ ಜೇನುಗೂಡಿಗೆ ಕಲ್ಲು ಎಸೆದಿದ್ದ ಎನ್ನಲಾಗಿದೆ. ಇದರಿಂದ ಜೇನು ನೋಣಗಳು ಅಲ್ಲಿದ್ದ ಮಕ್ಕಳ ಮೇಲೆ ದಾಳಿ ನಡೆಸಿತ್ತೆನ್ನಲಾಗಿದೆ. ಇದರಿಂದ ಮಕ್ಕಳು ಬೊಬ್ಬೆ ಹಾಕಿ ಓಡಿ ಹೋಗಿದ್ದು, ಕೂಡಲೇ ಶಿಕ್ಷಕರು, ಪೋಷಕರು ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…