pashupathi
ಕರಾವಳಿ

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆಗೆ ಪ್ರತಿಷ್ಠಿತ ಯುನಿವರ್ಸಲ್ ಮೀಡಿಯಾ ಅವಾರ್ಡ್ 2025

tv clinic
ಇಂಟರ್ನ್ಯಾಷನಲ್ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಯುನಿವರ್ಸಲ್ ಮೀಡಿಯಾ ಅವಾರ್ಡ್ 2025 ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಅವರು ಭಾಜನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಂಟರ್ನ್ಯಾಷನಲ್ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಯುನಿವರ್ಸಲ್ ಮೀಡಿಯಾ ಅವಾರ್ಡ್ 2025 ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಅವರು ಭಾಜನರಾಗಿದ್ದಾರೆ.

akshaya college

ಮಾಧ್ಯಮ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ದುಬೈ ನಲ್ಲಿ ಫೆಬ್ರವರಿ 24 ರಂದು ನಡೆಯುವ 47 ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಹಾಗೂ ಸಾಂಸ್ಕೃತಿಕ ವಿನಿಮಯ ಸಮ್ಮೇಳನ ದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.ದುಬೈ ಆಲ್ ಹಜ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಮೊಹಮ್ಮದ್ ಇಬ್ರಾಹಿಂ ಅಲ್ ಹಜ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಶ್ರೀನಿವಾಸ ನಾಯಕ್ ಇಂದಾಜೆ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ,, ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಳಿಕ ಪತ್ರಕರ್ತರ ಗ್ರಾಮ ವಾಸ್ತವ್ಯ, ಬ್ರಾಂಡ್ ಮಂಗಳೂರು ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕುತ್ತುರು ಸರಕಾರಿ ಶಾಲೆ, ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಅಭಿವೃದ್ಧಿಗೆ ಶ್ರಮಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…