ಕರಾವಳಿ

ಎಸ್‌ಡಿಪಿಐ ಪುತ್ತೂರು ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ವಿರುದ್ಧ ಸಹಿ ಸಂಗ್ರಹ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವಿಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನವು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಾಂಧಿಕಟ್ಟೆ ಬಳಿ, ಕಬಕ ಜಂಕ್ಷನ್, ವಿಟ್ಲ ಜಂಕ್ಷನ್, ಕುಂಬ್ರ ಜಂಕ್ಷನ್ ಹಾಗೂ ಉಪ್ಪಿನಂಗಡಿ ಪೇಟೆಯಲ್ಲಿ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವಿಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನವು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಾಂಧಿಕಟ್ಟೆ ಬಳಿ, ಕಬಕ ಜಂಕ್ಷನ್, ವಿಟ್ಲ ಜಂಕ್ಷನ್, ಕುಂಬ್ರ ಜಂಕ್ಷನ್ ಹಾಗೂ ಉಪ್ಪಿನಂಗಡಿ ಪೇಟೆಯಲ್ಲಿ ನಡೆಯಿತು.

akshaya college

ಈ ಸಂದರ್ಭದಲ್ಲಿ ವಿವಿಧ ಪಕ್ಷಗಳ ಮುಖಂಡರು, ಧಾರ್ಮಿಕ ಸಾಮಾಜಿಕ ಮುಖಂಡರು, ವಿದ್ಯಾರ್ಥಿಗಳು, ಲಾರಿ ಚಾಲಕರು, ರಿಕ್ಷಾ ಚಾಲಕರು ಮತ್ತು ಸಾರ್ವಜನಿಕರು ಅತ್ಯುತ್ಸಾಹದಿಂದ ಪಾಲ್ಗೊಂಡು ಎಸ್ ಡಿ ಪಿ ಐ ನಡೆಸುವ ಹೋರಾಟಕ್ಕೆ ಬೆಂಬಲವನ್ನು ಸೂಚಿಸಿದರು. 

      ಈ ಸಂದರ್ಭದಲ್ಲಿ ಮಾತನಾಡಿದ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಈಗಾಗಲೇ ವಿವಿಧ ಸ್ತರದ ಹೋರಾಟಗಳ ರೂಪುರೇಷೆ ಪಕ್ಷದ ಜಿಲ್ಲಾ ಸಮಿತಿ ರೂಪಿಸಿದ್ದು, ಇದರ ಭಾಗವಾಗಿ ಜಿಲ್ಲಾದ್ಯಂತ ಸಾರ್ವಜನಿಕರ ಸಹಿ ಸಂಗ್ರಹ ಅಭಿಯಾನ ನಡೆಸಿದ್ದು, ಮುಂದಿನ ಭಾಗವಾಗಿ ಫೆಬ್ರವರಿ 25 ರಂದು ಟೋಲ್ ಗೇಟ್ ಬಳಿ ಒಂದು ದಿನದ ಧರಣಿ ಸತ್ಯಾಗ್ರಹ ಕೂಡ ನಡೆಸಲು ಜಿಲ್ಲಾ ಸಮಿತಿಯು ತೀರ್ಮಾನಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…