ಮಂಗಳೂರು: ಜೈಲಿನಲ್ಲಿ ವಿಚಾರಣಾಧೀನ ಖೈದಿಗಳು ಅಸ್ವಸ್ಥರಾಗಿರುವ ಘಟನೆ ಇಂದು ಮಧ್ಯಾಹ್ನ ಮಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಮಧ್ಯಾಹ್ನದ ಊಟದ ಬಳಿಕ ಫುಡ್ ಪಾಯಿಸನ್ ನಿಂದ ಹತ್ತಕ್ಕೂ ಅಧಿಕ ಖೈದಿಗಳು ಅಸ್ವಸ್ಥಗೊಂಡಿದ್ದಾರೆ.ಏಕಾಏಕಿ ವಾಂತಿ ಮಾಡುತ್ತಾ ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಕೈದಿಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅಸ್ವಸ್ಥ ಕೈದಿಗಳನ್ನ ಸಹ ಕೈದಿಗಳು ತಾವೇ ಹೊತ್ತುತಂದಿದ್ದಾರೆ. ಈ ವೇಳೆ ನಾವು ಆಸ್ಪತ್ರೆಗೆ ಹೋಗುತ್ತೇವೆ ಎಂದು ಕೈದಿಗಳು ಪಟ್ಟು ಹಿಡಿದಿದ್ದರು. ಆಕ್ರೋಶಗೊಂಡಿದ್ದ ಕೈದಿಗಳನ್ನ ವಾಹನದಿಂದ ಕೆಳಗಿಳಿಸಿದ ಪೊಲೀಸರು, ಅಸ್ವಸ್ಥ ಕೈದಿಗಳನ್ನ ವೆಸ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಸ್ವಸ್ಥ ಖೈದಿಗಳನ್ನು ಮಂಗಳೂರಿನ ವೆನ್ಹಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.