Friday, November 22
Share News

ಮಂಗಳೂರು : ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ದ.ಕ ಜಿಲ್ಲೆಗೆ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ.

ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು , ಜಿಲ್ಲೆಯಲ್ಲಿ ಹರಿಯುತ್ತಿರುವ ವಿವಿಧ ನದಿಗಳು ತುಂಬಿ ಹರಿಯುತ್ತಿವೆ. ಹಳ್ಳ ಕೊಳ್ಳಗಳಲ್ಲಿಯೂ ನೀರಿನ ಹರಿವು ಹೆಚ್ಚಾಗಿದೆ. ಅಲ್ಲದೇ ಭೂ ಕುಸಿತ , ಗುಡ್ಡ ಕುಸಿತದಂತಹ ದುರ್ಘಟನೆಗಳು ಅಲ್ಲಲ್ಲಿ ವರದಿಯಾಗುತ್ತಿದೆ.

ವಿಪರೀತವಾಗಿ ಬೀಸುತ್ತಿರುವ ಗಾಳಿಯಿಂದ ಮರಗಳು ವಿದ್ಯುತ್‌ ಕಂಬದ ಮೇಲೆ ಬಿದ್ದು ಅವಘಡಗಳು ಸಂಭವಿಸುತ್ತಿದ್ದು ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.


Share News

Comments are closed.

Exit mobile version