ಕಡಬ ತಾಲೂಕಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಓಂತ್ರಡ್ಕದಲ್ಲಿ ಆಂಗ್ಲ ಭಾಷ ಪದವೀಧರ ಶಿಕ್ಷಕರಾಗಿ ಕರ‍್ಯನಿರ್ವಹಿಸುತ್ತಿರುವ ಶೈಕ್ಷಣಿಕ ಚಿಂತಕ, ಅಂಕಣಕಾರ, ಕಥೆಗಾರ ದಿಲೀಪ್ ಕುಮಾರ್ ಸಂಪಡ್ಕ ಇವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ (ರಿ) ನೀಡುವ ರಾಷ್ಟಿçÃಯ ಶಿಕ್ಷಣ ಸೌರಭ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರು ಓಂತ್ರಡ್ಕ ಶಾಲೆಯಲ್ಲಿ ೦೯ ವರ್ಷಗಳಿಂದ ಪದವೀಧರ ಪ್ರಾಥಮಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಸುಮಾರು ಒಂಭತ್ತು ವರ್ಷಗಳ ಕಾಲ ಬೆಂಗಳೂರಿನ ಪ್ರತಿಷ್ಠಿತ ಸಿ.ಬಿ.ಎಸ್.ಸಿ ಶಾಲೆಗಳಲ್ಲಿ ಶೈಕ್ಷಣಿಕ ಕೋ-ಆರ್ಡಿನೇಟರ್, ಪ್ರಾಂಶುಪಾಲರಾಗಿ ಸಹ ಕಾರ್ಯನಿರ್ವಹಿಸಿರುತ್ತಾರೆ. ಒಟ್ಟು ೧೬ ವರ್ಷಗಳ ಸೇವಾನುಭವನ್ನು ಹೊಂದಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಹಲವು ತರಬೇತಿಗಳಿಗೆ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಶಿಕ್ಷಕರಿಗೆ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದಾರೆ. ಕೊರೋನಾ ಕಾಲದಲ್ಲಿ ಕಲಿಕಾ ಚೇತರಿಕೆಯ ೮ನೇ ತರಗತಿಯ ಇಂಗ್ಲೀಷ್ ಕಲಿಕಾ ಹಾಳೆ ತಯಾರಿಕೆಯ ಸಂಪನ್ಮೂಲ ತಂಡದಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿರುತ್ತಾರೆ. ಇವರ ಹಲವು ಲೇಖನಗಳು ರಾಜ್ಯದ ಹಲವು ಪತ್ರಿಕೆಗಳಲ್ಲಿ, ರಾಷ್ಟಿçÃಯ ಮತ್ತು ಅಂತರಾಷ್ಷೀಯ ನಿಯತಕಾಲಿಕೆಗಳಲ್ಲಿ ಕೂಡ ಪ್ರಕಟಗೊಂಡಿದೆ. ಈ ಹಿಂದೆ ಇವರು ಬರೆದಿರುವ ಲೇಖನವನ್ನು ಮೆಚ್ಚಿ ಅಂದಿನ ಶಿಕ್ಷಣ ಸಚಿವರಾಗಿದ್ದ ಶ್ರೀ ಸುರೇಶ್ ಕುಮಾರ್‌ರವರು ಇವರಿಗೆ ದೂರವಾಣಿ ಕರೆ ಮಾಡಿ ಅಂಭಿನAದಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಇದರ ಜೊತೆ ರಾಷ್ಡಿçÃಯ ಮಟ್ಟದಲ್ಲಿ ಶೈಕ್ಷಣಿಕ ಆಡಳಿತ ಸುಧಾರಣೆಗೆ ಭಾರತೀಯ ಶಿಕ್ಷಣ ಸೇವೆ (ಐಇಎಸ್) ಯನ್ನು ಆರಂಭಿಸಬೇಕು ಮತ್ತು ಈ ಪರೀಕ್ಷೆಯನ್ನು ನಡೆಸುವ ನಿಯಮಗಳ ಬಗ್ಗೆ ಇವರು ಸಿದ್ದಪಡಿಸಿದ ಪ್ರಸ್ತಾವನೆಗೆ ಪ್ರಧಾನ ಮಂತ್ರಿಗಳಿAದ ಸ್ಪಂದನೆ ಕೂಡ ದೊರೆತಿರುವುದು ಇವರ ಶೈಕ್ಷಣಿಕ ಚಿಂತನೆಗೆ ಸಾಕ್ಷಿಯಾಗಿದೆ. ಇವರು ರಾಷ್ಟಿçÃಯ ಮತ್ತು ಅಂತರಾಷ್ಷೀಯ ಸಮ್ಮೆಳನಗಳಲ್ಲಿ ಕೂಡ ತಮ್ಮ ಸಂಶೋಧನಾ ಲೇಖನಗಳನ್ನು ಮಂಡಿಸಿರುತ್ತಾರೆ. ಕೆಲವು ಪದವಿ ಮಟ್ಟದ ಪಠ್ಯಪುಸ್ತಕಗಳಿಗೆ ಪಾಠಗಳನ್ನು ಬರೆದಿರುವ ಅನುಭವ ಇವರಿಗಿದೆ. ಕುವೆಂಪು ವಿಶ್ವವಿದ್ಯಾನಿಲಂiÀiದಿAದ ಎಂ.ಎ ಅರ್ಥಶಾಸ್ತçದಲ್ಲಿ ಎಳನೆಯ ರ‍್ಯಾಂಕ್ ಗಳಿಸಿರುವ ಇವರು ಅಳಗಪ್ಪ ವಿಶ್ವವಿದ್ಯಾನಿಲಯಿಂದ ಎಂ.ಎ (ಇಂಗ್ಲೀಷ್), ಕುವೆಂಪು ವಿಶ್ವವಿದ್ಯಾನಿಲಯಿಂದ ಎಂ.ಎ (ಇತಿಹಾಸ), ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯಿಂದ ಎಂ.ಇಡಿ (ಶಿಕ್ಷಣ)ಮತ್ತು ಮೈಸ್ ನಿಂದ ಡಿ.ಸಿ.ಎ ಪದವಿಗಳನ್ನು ಪಡೆದಿರುತ್ತಾರೆ. ಕೆ-ಸೆಟ್ ಪರೀಕ್ಷೆಯನ್ನು ಕೂಡ ತೆರ್ಗಡೆ ಹೊಂದಿರುತ್ತಾರೆ. ಇವರು ರಂಗಭೂಮಿ ಕಲಾವಿದರಾಗಿ, ಹಲವಾರು ರಂಗಪ್ರÀದರ್ಶನಗಳಲ್ಲಿ ಸಹ ಹೆಸರು ಮಾಡಿದ್ದಾರೆ. ವಿವಿಧ ಶಿಕ್ಷಕ ಸಂಘಟನೆಗಳ ಮೂಲಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದಿಲೀಪ್ ಕುಮಾರ್‌ರವರ ಶಿಕ್ಷಣ, ಸಂಘಟನೆ ಹಾಗೂ ಸಮಾಜ ಸೇವೆೆಯನ್ನು ಪರಿಗಣಿಸಿ ಭಾನುವಾರ ಶಿವಮೊಗ್ಗದ ಕರ್ನಾಟಕ ಸಂಘದ ಸಭಾಭವನದಲ್ಲಿ ನಡೆದ ರಾಷ್ಟçಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ (ರಿ) ಅಧ್ಯಕ್ಷರಾದ ಶ್ರೀ ಮುಧುನಾಯ್ಕ ಲಂಬಾಣಿ ಇವರ ಸಮ್ಮುಖದಲ್ಲಿ ರಾಷ್ಟçಮಟ್ಟದ ಶಿಕ್ಷಣ ಸೌರಭ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಹಿಂದೆ ಇವರಿಗೆ ಕನ್ನಡ ರಕ್ಷಣಾ ವೇದಿಕೆಯು ರಾಜ್ಯಮಟ್ಟದ ಶಿಕ್ಷಣ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇತ್ತೀಚಿಗೆ ಇವರ ‘ಕೊರೊನಾ ಕಾಲದ ಮಾತು ಮಂಥನ’ ಎಂಬ ಕೃತಿಯು ಪ್ರಕಟಗೊಂಡಿದೆ. ರಾಜ್ಯ ಮತ್ತು ಜಿಲ್ಲೆಯ ಹಲವು ಸಂಘ, ಸಂಸ್ಥೆಗಳೂ ಸೇರಿದಂತೆ ಶಿಕ್ಷಕರು, ಸಂಘಟನೆಗಳು ಇವರನ್ನು ಅಭಿನಂದಿಸಿವೆ.
ರಾಷ್ಟ್ರ ಮಟ್ಟದ ‘ಶಿಕ್ಷಣ ಸೌರಭ’ ಪ್ರಶಸ್ತಿಗೆ ದಿಲೀಪ್ ಕುಮಾರ್ ಆಯ್ಕೆ
What's your reaction?
- 194c
- 194cc
- 1ai technology
- 1artificial intelegence
- 1avg
- 1bt ranjan
- 1co-operative
- 1crime news
- 1death news
- 1gl
- 1google for education
- 1independence
- 1jewellers
- 1karnataka state
- 1lokayuktha
- 1lokayuktha raid
- 1manipal
- 1minister krishna bairegowda
- 1mla ashok rai
- 1nidana news
- 0ptr tahasildar
- 0puttur
- 0puttur news
- 0puttur tahasildar
- 0revenue
- 0revenue department
- 0revenue minister
- 0society
- 0sowmya
- 0tahasildar
- 0tahasildar absconded
- 0udupi
Related Posts
KSOU:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ;ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಣ…
ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ | ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ ದೇವಸ್ಯ ಪುನರಾಯ್ಕೆ
ಪಾಣಾಜೆ: ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಅವರ…
ಅತಿಥಿ ಉಪನ್ಯಾಸಕರ ನೇಮಕ ವಿಳಂಬ: ಸೆಮಿಸ್ಟರ್ ಅವಧಿ ವಿಸ್ತರಣೆ!
ಮಂಗಳೂರು: ರಾಜ್ಯಾದ್ಯಂತ ಶೈಕ್ಷಣಿಕ ಕ್ಯಾಲೆಂಡರ್ ಯಥಾಸ್ಥಿತಿಗೆ ಬರುತ್ತಿದೆ ಎಂಬ ಆಶಾಭಾವ…
ಕರಾಟೆ: ಅಂಬಿಕಾದ ವಿದ್ಯಾಲಯದ ದೃಶಾನ ರಾಷ್ಟ್ರಮಟ್ಟಕ್ಕೆ ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…
ಜುಲೈ 26: ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯೋತ್ಸವ | ಕಾರ್ಗಿಲ್ ಯೋಧರಿಗೆ ಸ್ಮರಣಿಕೆ ನೀಡಿ ವಿಜಯೋತ್ಸವ, ರಕ್ಷಾಬಂಧನ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ …
ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ | ರಾಜೇಶ್ ಬನ್ನೂರು ಮನೆಗೆ ತಲುಪಿಸಿದ ಸನ್ಮಾನ
ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ…
ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ
ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ "ಫಸೆರಾ" ಫ್ಯಾಷನ್…
ಪುತ್ತೂರು ಅಕ್ಷಯ ಸಮೂಹ ಸಂಸ್ಥೆಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪ್ರಜ್ಞಾನಮ್ ಸಂಸ್ಕೃತ ತರಬೇತಿ
ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ…
ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ
ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಾರದಾ ಪೂಜೆ, ಆಯುಧ ಪೂಜೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…