ಶಿಕ್ಷಣ

ಭರತನಾಟ್ಯ ವಿದ್ವತ್ ಪರೀಕ್ಷೆ: ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಸಿಂಚನ ಲಕ್ಷ್ಮಿ ಕೋಡಂದೂರು

ಕರ್ನಾಟಕ ರಾಜ್ಯ ಡಾ .ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ವಿಶ್ವವಿದ್ಯಾಲಯ ಮೈಸೂರ್ ನಡೆಸಿದ ಕರ್ನಾಟಕ ಶಾಸ್ತ್ರೀಯ ಭರತನಾಟ್ಯ ವಿದ್ವತ್ ಪರೀಕ್ಷೆಯ ಅಂತಿಮ ವಿಭಾಗದಲ್ಲಿ ಸಿಂಚನ ಲಕ್ಷ್ಮಿ ಕೋಡಂದೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕರ್ನಾಟಕ ರಾಜ್ಯ ಡಾ .ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ವಿಶ್ವವಿದ್ಯಾಲಯ ಮೈಸೂರ್ ನಡೆಸಿದ ಕರ್ನಾಟಕ ಶಾಸ್ತ್ರೀಯ ಭರತನಾಟ್ಯ ವಿದ್ವತ್ ಪರೀಕ್ಷೆಯ ಅಂತಿಮ ವಿಭಾಗದಲ್ಲಿ ಸಿಂಚನ ಲಕ್ಷ್ಮಿ ಕೋಡಂದೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

akshaya college

ಸ್ವರ ಸಿಂಚನ ಕಲಾತಂಡದ ಅರಳು ಪ್ರತಿಭೆಯಾಗಿದ್ದು, ಭರತನಾಟ್ಯದ ಜೊತೆಗೆ ಸಂಗೀತಕ್ಕೂ ಸೈ ಎನಿಸಿ ತನ್ನ ಕಲಾ ಪ್ರೌಢಿಮೆಯನ್ನು ಮೆರೆದಿದ್ದಾರೆ. ಇವರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಅಂಡ್ ಟೆಕ್ನಾಲಜಿ ಫೈನಲ್ ಇಯರ್ (BE)Data Science ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

2024ರ ನವರಾತ್ರಿಗೆ ಧರ್ಮಸ್ಥಳದಲ್ಲಿ ಸಂಗೀತ ಕಚೇರಿ ನೀಡಿದ್ದು ಇವರ ಹೆಗ್ಗಳಿಕೆ.
ಅಲ್ಲದೆ ತೃತೀಯ ವಿಶ್ವ ಹವ್ಯಕ ಸಮ್ಮೇಳನ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶನವನ್ನು ನೀಡಿದ್ದಾರೆ. ಏಪ್ರಿಲ್ ತಿಂಗಳಲ್ಲಿ ಭರತನಾಟ್ಯ ರಂಗ ಪ್ರವೇಶವನ್ನು ನೀಡಲಿದ್ದಾರೆ. ಇವಳಿಗೆ ಈಗಾಗಲೇ ಪೆರ್ನಾಜೆ ಪ್ರಶಸ್ತಿ, ಗಡಿನಾಡ ದ್ವನಿ ಪ್ರಶಸ್ತಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಗೌರವಿಸಿದೆ.

ಇವರು ಕುಂಬಳೆ ನಾಟ್ಯ ವಿದ್ಯಾಲಯದ ವಿದುಷಿ ಡಾ. ವಿದ್ಯಾ ಲಕ್ಷ್ಮಿ ಇವರ ಶಿಷ್ಯೆ ಹಾಗೂ ವಿಟ್ಲ ಐ ಟಿ ಐ ಸುಪ್ರಜೀತ್ ಕಾಲೇಜಿನ ನಿವೃತ ಪ್ರಾಂಶುಪಾಲ ಕೆ ರಘುರಾಮ ಶಾಸ್ತ್ರಿ ಹಾಗೂ ಸ್ವರ ಸಿಂಚನ ಸಂಗೀತ ಶಾಲೆ ಶಿಕ್ಷಕಿ ಸವಿತಾ ಕೊಡಂದೂರು ಅವರ ಪುತ್ರಿ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಯೋಗ ದಿನಾಚರಣೆ | ದೇಹದ ನಿಯಂತ್ರಣಕ್ಕೆ ಯೋಗಾಭ್ಯಾಸ ಅಗತ್ಯ: ಮಾಲತಿ ಡಿ.

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ  ಬಪ್ಪಳಿಗೆಯ ಅಂಬಿಕಾ…

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನಲ್ಲಿ ತಲೆಯೆತ್ತಲಿರುವ ‘ಸಿಂಧೂರವನ’ |ಪ್ರತಿಯೊಂದು ಗಿಡಕ್ಕೂ ಒಬ್ಬೊಬ್ಬ ಕಾರ್ಗಿಲ್ ಯೋಧನ ಹೆಸರು!

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…