ಶಿಕ್ಷಣ

ಸಂತ ಫಿಲೋಮಿನಾ ಕಾಲೇಜಿಗೆ ಮಂಗಳೂರು ವಿಶ್ವವಿದ್ಯಾನಿಲಯ, ಯುಜಿಸಿಯಿಂದ ಸ್ವಾಯತ್ತ ಸ್ಥಾನಮಾನ – ಮಾ.22ಕ್ಕೆ ಉದ್ಘಾಟನೆ

GL
ಆರು ದಶಕಗಳಿಗೂ ಹೆಚ್ಚಿನ ಇತಿಹಾಸವುಳ್ಳ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಕರ್ನಾಟಕ ಸರಕಾರದ ಅನುಮೋದನೆಯೊಂದಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟಿರುತ್ತದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರು ದಶಕಗಳಿಗೂ ಹೆಚ್ಚಿನ ಇತಿಹಾಸವುಳ್ಳ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಕರ್ನಾಟಕ ಸರಕಾರದ ಅನುಮೋದನೆಯೊಂದಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟಿರುತ್ತದೆ. ಕಾಲೇಜಿಗೆ ದೊರೆತ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಕಾರ್ಯಕ್ರಮ ಮಾ.22ರಂದು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಕಾಲೇಜಿನ ಸಂಚಾಲಕ ಮಾಯ್ ದೆ ದೇವುಸ್ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ| ಲಾರೆನ್ಸ್ ಮಸ್ಕರೇನಸ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

chennai-shopping
maithri

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ| ಪೀಟರ್ ಪಾವ್ ಸಲ್ದಾನಾರವರು ವಹಿಸಲಿದ್ದು, ಬೆಂಗಳೂರು ಮಹಾನಗರ ಮೆಟ್ರೊಪೊಲಿಟನ್ ಧರ್ಮಪ್ರಾಂತ್ಯದ ಚರ್ಚ್ ಬಿಷಪ್ ಡಾ| ಪೀಟರ್ ಮಚಾದೋರವರು ಉದ್ಘಾಟಿಸಿ ಆಶೀರ್ವದಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಫರೀದ್ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ, ಸಂಸತ್ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಐವನ್‌ ಡಿಸೋಜ, ಮಾಜಿ ಸಂಸದ ನಳಿನ್ ಕುಮಾ‌ರ್ ಕಟೀಲ್, ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ| ಪಿ ಎಲ್ ಧರ್ಮ, ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ಇದರ ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ| ಕವಿತಾ ಕೆ ಆರ್. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್, ಮಂಗಳೂರು ಧರ್ಮಪ್ರಾಂತ್ಯದ ಗುರು ಮೊನ್ಸಿಂಜೊರ್ ಮ್ಯಾಕ್ಸಿಮ್ ನೊರೊನ್ಹಾ, ಹಾಗೂ ಕಥೋಲಿಕ್ ಬೋರ್ಡ್ ಆಫ್ ಎಜ್ಯುಕೇಶನ್‌ನ ನಿಕಟ ಪೂರ್ವ ಕಾರ್ಯದರ್ಶಿ ವಂ। ಆಂಟನಿ ಮೈಕೆಲ್ ಶೆರಾ ಅವರು ಭಾಗವಹಿಸಲಿದ್ದಾರೆ ಎಂದವರು ಹೇಳಿದರು.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬಿಬಿಎ, ಬಿಸಿಎ, ಬಿಎಸ್ಸಿ ಕೋರ್ಸ್ ಆರಂಭ:

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ಸುಕತೆಯಿಂದ ಕಾರ್ಯ ನಿರ್ವಹಿಸಲು ಸ್ವಾಯತ್ತ ಸ್ಥಾನಮಾನವು ಪ್ರೇರಣೆ ನೀಡಿದೆ.

ಕಾಲೇಜಿನಲ್ಲಿ ಈಗಾಗಲೇ ಪದವಿ ವಿಭಾಗದಲ್ಲಿ ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಹಾಗೂ ಬಿಸಿಎ (ಎಐ ಹಾಗು ಎಂಎಲ್), ಕೋರ್ಸ್‌ಗಳನ್ನು ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಂಎಸ್‌ಡಬ್ಲ್ಯೂ, ಎಂಕಾಂ, ಭೌತಶಾಸ್ತ್ರ ಹಾಗೂ ಗಣಿತದಲ್ಲಿ ಎಂಎಸ್ಸಿ ಕೋರ್ಸ್‌ಗಳನ್ನು ನೀಡಲಾಗುತ್ತಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಂಸಿಎ ಕೋರ್ಸ್‌ನ್ನು ಪ್ರಾರಂಭಿಸಲಾಗಿದೆ.

ಕ್ಷಿಪ್ರಗತಿಯಲ್ಲಿ ಬದಲಾವಣೆ ಹೊಂದುತ್ತಿರುವ ಉದ್ಯೋಗಕ್ಷೇತ್ರದ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬಿಬಿಎ (ಬ್ಯುಸಿನೆಸ್ ಅನಲಿಟಿಕ್ಸ್), ಬಿಸಿಎ (ಡೇಟಾ ಅನಲಿಟಿಕ್ಸ್) ಹಾಗೂ ಬಿಎಸ್ಪಿ (ಡೇಟಾ ಸಯನ್ಸ್) ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದು ಎಂದು ಫಾ। ಲಾರೆನ್ಸ್ ಮಸ್ಕರೇನಸ್ ತಿಳಿಸಿದರು.

ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯನ್ನು ಗುರಿಯಾಗಿರಿಸಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ನಮ್ಮ ಪಠ್ಯ ಕ್ರಮವನ್ನು ಇನ್ನಷ್ಟು ಕ್ರಿಯಾತ್ಮಕವಾಗಿ ರೂಪುಗೊಳಿಸಿ ವಿದ್ಯಾರ್ಥಿಗಳಿಗೆ ಹಲವು ಐಚ್ಚಿಕ ವಿಷಯಗಳನ್ನು ನೀಡಿ ಕೌಶಲ್ಯಾಧರಿತ ಕಲಿಕೆಗೆ ಒತ್ತು ನೀಡಲಾಗುತ್ತದೆ. ಕಾಲೇಜಿನಲ್ಲಿ ವಿದ್ಯಾರ್ಥಿ ಕೇಂದ್ರಿತ, ಪಾರದರ್ಶಕ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು ಸಕಾಲಿಕ ಮೌಲ್ಯಮಾಪನ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯ ಕಡೆಗೆ ನಿರಂತರ ಗಮನಹರಿಸಲಾಗುವುದು ಎಂದು ಫಾ ಲಾರೆನ್ಸ್ ಮಸ್ಕರೇನಸ್ ತಿಳಿಸಿದರು.

ಹಲವಾರು ಯೋಜನೆ ಅನುಷ್ಠಾನಕ್ಕೆ:

ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟನಿ ಪ್ರಕಾಶ್ ಮೊಂತೇರೊ. ಉಪಪ್ರಾಂಶುಪಾಲ ಡಾ| ವಿಜಯಕುಮಾರ್ ಎಂ. ರೆಜಿಸ್ಟ್ರಾರ್ ಅಕಾಡೆಮಿಕ್ ಡಾ| ನಾರ್ಬಟ್್ರ ಮಸ್ಕರೇನಸ್, ಪರೀಕ್ಷಾಂಗ ಕುಲಸಚಿವರಾದ ಡಾ। ವಿನಯಚಂದ್ರ, ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿಕೊಸ್ಟಾ, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಮತಿ ಭಾರತಿ ಎಸ್ ರೈ ಉಪಸ್ಥಿತರಿದ್ದರು.

ಸಂಸ್ಥೆ ಶೈಕ್ಷಣಿಕ ಶ್ರೇಷ್ಠತೆ, ಸಂಶೋಧನೆ, ಸಮಗ್ರ ಶಿಕ್ಷಣಕ್ಕೆ ಸದಾ ಬದ್ಧ:

ಕಾಲೇಜಿನ ಪ್ರಾಂಶುಪಾಲರ ದಕ್ಷ ಹಾಗೂ ದೂರದರ್ಶಿತ್ವದ ನಾಯಕತ್ವ, ಆಡಳಿತ ಮಂಡಳಿಯ ಅಚಲ ಬೆಂಬಲ, ನಮ್ಮ ಅಧ್ಯಾಪಕರು ಮತ್ತು ಸಿಬ್ಬಂದಿಗಳ ಸಮರ್ಪಣಾ ಮನೋಭಾವ ಮತ್ತು ನಮ್ಮ ವಿದ್ಯಾರ್ಥಿಗಳ ಉತ್ಸಾಹದಿಂದ, ಸ್ವಾಯತ್ತ ಸ್ಥಾನಮಾನದ ನೂತನ ಅಧ್ಯಾಯವು ನಮ್ಮ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬಲ್ಲದು ಎಂಬ ಆತ್ಮವಿಶ್ವಾಸವಿದೆ. ಪ್ರಸ್ತುತ ಕಾಲೇಜಿನಲ್ಲಿ 1680 ಮಂದಿ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ನಮ್ಮೊಂದಿಗೆ ಅಭಿವೃದ್ಧಿ ಕಾರ್ಯಗಳಲ್ಲಿ ಸದಾ ಕೈ ಜೋಡಿಸುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಮತ್ತು ರಕ್ಷಕ ಶಿಕ್ಷಕ ಸಂಘದ ಸಹಕಾರ ಪ್ರಶಂಸನೀಯ. ನಮ್ಮ ಸಂಸ್ಥೆಯು ಶೈಕ್ಷಣಿಕ ಶ್ರೇಷ್ಠತೆ, ಸಂಶೋಧನೆ ಮತ್ತು ಸಮಗ್ರ ಶಿಕ್ಷಣಕ್ಕೆ ಸದಾ ಬದ್ಧವಾಗಿರುತ್ತದೆ. ಸ್ವಾಯತ್ತತೆ ಕೇವಲ ಒಂದು ಸವಲತ್ತು ಮಾತ್ರವಲ್ಲದೆ ಅದು ಒಂದು ಮಹತ್ತರ ಜವಾಬ್ದಾರಿಯಾಗಿದೆ. ಕಾಲೇಜಿಗೆ ಸಂಬಂಧಪಟ್ಟ ಎಲ್ಲಾ ವ್ಯಕ್ತಿಗಳ ಬೆಂಬಲದೊಂದಿಗೆ ಮುಂದಿನ ದಿನಗಳಲ್ಲಿ ನಾವು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿದ್ದೇವೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ಸಮಾಜಕ್ಕೆ ಕೊಡುಗೆ ನೀಡುವಂತಾಗಲಿ ಎಂಬುದು ನಮ್ಮೆಲ್ಲರ ಆಶಯ. ನಮ್ಮ ಸಂಸ್ಥೆಗೆ ಈ ಸ್ಥಾನಮಾನ ದೊರೆಯುವಲ್ಲಿ ಶ್ರಮವಹಿಸಿದ ಪ್ರತಿಯೋರ್ವರಿಗೂ ನಾವು ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸುತ್ತೆನೆ. ಸ್ವಾಯತ್ತ ಸ್ಥಾನಮಾನವು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ನಮ್ಮ ಸಂಸ್ಥೆ ತೋರುತ್ತಿರುವ ಬದ್ಧತೆಗೆ ಸಾಕ್ಷಿಯಾಗಿದೆ.

ಫಾ ಲಾರೆನ್ಸ್ ಮಸ್ಕರೇನಸ್ ಸಂಚಾಲಕರು, ಸಂತ ಫಿಲೋಮಿನಾ ಕಾಲೇಜು


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ…