ಶಿಕ್ಷಣ

ಕಾರಂಜಿಯಂತೆ ಜೀವನೋತ್ಸಾಹ ಮೇಲ್ಮುಖವಾಗಿ ಚಿಮ್ಮುತ್ತಿರಲಿ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರಂಜಿ ಉದ್ಘಾಟಿಸಿ ಡಾ. ಪ್ರಭಾಕರ ಭಟ್ ಕಲ್ಲಡ್ಕ | ದಿ. ಜಿ.ಎಲ್. ಆಚಾರ್ಯ ಜನಶತಾಬ್ದಿ ಸವಿನೆನಪಿಗೆ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಅವರಿಂದ ಕೊಡುಗೆ

ಕಾರಂಜಿಯಲ್ಲೂ ಒಂದು ಧ್ಯೇಯದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಾರಂಜಿಯಲ್ಲೂ ಒಂದು ಧ್ಯೇಯದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

Shani-pooja

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮುಂಭಾಗದಲ್ಲಿ, ದಿವಂಗತ ಜಿ.ಎಲ್.ಆಚಾರ್ಯ ಅವರ ಜನ್ಮ ಶತಾಬ್ಧಿಯ ಸನೆನಪಿಗಾಗಿ ಅವರ ಪುತ್ರ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಅವರು ಕೊಡುಗೆಯಾಗಿ ನೀಡಿದ ಕಾರಂಜಿಯ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತಾಡಿದರು.

ದಿವಂಗತ ಜಿ.ಎಲ್.ಆಚಾರ್ಯ ಅವರು ಅಂದಿನ ದಿನಗಳಲ್ಲಿ ವಿಧ್ಯಾವರ್ಧಕ ಸಂಘದ ಏಳಿಗೆಗಾಗಿ ದುಡಿದವರು. ಇಂದು ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಅನೇಕ ಸಮಾಜಮುಖೀ ಕಾರ್ಯಗಳನ್ನು ನಡೆಸುತ್ತಿರುವುದು ಸಂತೋಷವನ್ನು ತಂದಿದೆ. ಇದರಿಂದ ಅವರ ಆತ್ಮಕ್ಕೂ ಸಂತೋಷವಾಗಿರಬಹುದು ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ, ನಿರ್ದೆಶಕ ಬಲರಾಮ ಆಚಾರ್ಯ.ಜಿ, ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಲಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಎಲೆಕ್ಟ್ರಾನಿಕ್ಸ್ ಭಾಗದ ಪ್ರಯೋಗಾಲಯ ಮೇಲ್ವಿಚಾರಕ ಹರಿಪ್ರಸಾದ್.ಡಿ ಸ್ವಾಗತಿಸಿ, ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ…