ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಮುಖ್ಯ ಶಿಕ್ಷಕರಾಗಿದ್ದ ಯಶೋಧರ ಎನ್ ಇವರು ಮಾರ್ಚ್ 31ರಂದು ವಯೋ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ 1 ಏಪ್ರಿಲ್ 2025 ರಿಂದ ಪ್ರೌಢಶಾಲೆಯ ನೂತನ ಮುಖ್ಯಶಿಕ್ಷಕರಾಗಿ ಗಣಿತ-ವಿಜ್ಞಾನ ಸಹಶಿಕ್ಷಕರಾದ ಉದಯಕುಮಾರ್ ರೈ ಎಸ್ ಅಧಿಕಾರ ವಹಿಸಿಕೊಂಡಿದ್ದಾರೆ. 30.03.1998ರಲ್ಲಿ ಶಿಕ್ಷಕರಾಗಿ ಸೇರ್ಪಡೆಗೊಂಡು, 28.07.1998 ರಂದು ಇಲಾಖಾ ಅನುಮೋದನೆಯೊಂದಿಗೆ ಖಾಯಂ ಸಹಶಿಕ್ಷಕರಾಗಿ 27 ವರ್ಷಗಳ ಸೇವಾ ಅನುಭವ ಹೊಂದಿರುವ ಇವರು 2023ರ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು. 1.6.2024 ರಿಂದ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಳೆದ 12 ವರ್ಷಗಳಿಂದ ಭಾರತ್ ಸೈಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಪಂಜ ಇದರ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಪತ್ನಿ ದಿವ್ಯ ಆಳ್ವರವರು ಕುಂಬ್ರ ಸರಕಾರಿ ಪದವಿ ಪೂರ್ವಕಾಲೇಜಿನಲ್ಲಿ ರಸಾಯನಶಾಸ್ತ್ರ ಉಪನ್ಯಾಸಕಿ.