ಶಿಕ್ಷಣ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ | ಕರಾವಳಿಗೆ ಒಲಿದ ಮೊದಲೆರಡು ಸ್ಥಾನ

GL
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ-1 ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 4, 2025ರವರೆಗೆ ನಡೆದಿದ್ದವು. ಇನ್ನು ಇಂದು (ಮೇ 2) ಅಂದುಕೊಂಡಂತೆ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ-1 ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 4, 2025ರವರೆಗೆ ನಡೆದಿದ್ದವು. ಇನ್ನು ಇಂದು (ಮೇ 2) ಅಂದುಕೊಂಡಂತೆ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಿದೆ.

chennai-shopping
maithri

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಪ್ರಸಕ್ತ ವರ್ಷ ಶೇ.66.1ಫಲಿತಾಂಶ ಬಂದಿದೆ. ಅದರಲ್ಲೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಮೊದಲೆರಡು ಸ್ಥಾನವನ್ನು ಅಲಂಕರಿಸಿವೆ ಎಂದು ತಿಳಿಸಿದರು.

ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ (ಶೇ.91.12), ಉಡುಪಿ ಜಿಲ್ಲೆ (ಶೇ.89.96), ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಪಡೆದಿವೆ.

ಈ ಬಾರಿ ಶೇ. 62.14 ಫಲಿತಾಂಶ ಬಂದಿದೆ. ಎಂದಿನಂತೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಮಧ್ಯಾಹ್ನ 12.30ರ ನಂತರ ಇಲಾಖೆಯ ಅಧಿಕೃತ ವೆಬ್​ಸೈಟ್​​ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಡಿದಂತೆಯೇ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿಗಳಿಗೂ ಈ ವರ್ಷ ಇನ್ನೆರಡು ಪರೀಕ್ಷೆಯ ಅವಕಾಶ ನೀಡಲಾಗುತ್ತಿದೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳು ಇನ್ನು ಎರಡು ಬಾರಿ ಪರೀಕ್ಷೆ ಬರೆಯಬಹುದಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts