ಶಿಕ್ಷಣ

ಹಾರಾಡಿ ಶಾಲೆಯಲ್ಲಿ ಮೇಳೈಸಿದ ಶಾಲಾ ಪ್ರಾರಂಭೋತ್ಸವ

ಪುತ್ತೂರು: ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಇಲ್ಲಿ ಶಾಲಾ ಪ್ರಾರಂಭೋತ್ಸವವು ಹೊಸದಾಗಿ ಶಾಲೆಗೆ ಸೇರಿದ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳುವ ಮೂಲಕ ವಿಜೃಂಭಣೆಯಿಂದ ನೆರವೇರಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಇಲ್ಲಿ ಶಾಲಾ ಪ್ರಾರಂಭೋತ್ಸವವು ಹೊಸದಾಗಿ ಶಾಲೆಗೆ ಸೇರಿದ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳುವ ಮೂಲಕ ವಿಜೃಂಭಣೆಯಿಂದ ನೆರವೇರಿತು.

Shani-pooja

ಈ ವರ್ಷ ದಾಖಲಾದ ಸುಮಾರು 150ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಕೈಯಲ್ಲಿ ಬಣ್ಣ ಬಣ್ಣದ ಬೆಲೂನ್ ಗಳನ್ನೂ ಹಿಡಿದು ಮೆರವಣಿಗೆಯ ಮೂಲಕ ಶಾಲೆಯ ಅಂಗಣಕ್ಕೆ ಬಂದಾಗ ಆರತಿ ಎತ್ತಿ ಹೂಮಳೆ ಸುರಿದು ಸ್ವಾಗತಿಸಲಾಯಿತು. ತದ ನಂತರ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಕೊಡಲಾಯಿತು.

ಕಾರ್ಯಕ್ರಮದಲ್ಲಿ ನಗರಸಭಾ ಕೌನ್ಸಿಲರ್ ಪ್ರೇಮಲತಾ ನಂದಿಲ, ಎಸ್ ಡಿಎಂಸಿ ಅಧ್ಯಕ್ಷೆ ಸುಲೋಚನಿ, ಮುಖ್ಯ ಶಿಕ್ಷಕರಾದ ಕೆ.ಕೆ ಮಾಸ್ತರ್, ನಗರ ಸಭಾ ಸದಸ್ಯ ದಿನೇಶ್ ಶೇವಿರೆ, ಹಿರಿಯ ಶಿಕ್ಷಕಿ ಗಂಗಾವತಿ ಮತ್ತು ಎಸ್ ಡಿಎಂಸಿ ಸದಸ್ಯರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಆದರದಿಂದ ಬರಮಾಡಿಕೊಂಡರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ…