ಶಿಕ್ಷಣ

ಮೈಸೂರು ವಿವಿಯ ಡಾಕ್ಟರೇಟನ್ನು ನಯವಾಗಿ ತಿರಸ್ಕರಿಸಿದ ಸಚಿವ!

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ಜಾರಕಿಹೊಳಿ ನಯವಾಗಿ ತಿರಸ್ಕರಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ಜಾರಕಿಹೊಳಿ ನಯವಾಗಿ ತಿರಸ್ಕರಿಸಿದ್ದಾರೆ.

akshaya college

ಈ ಸಂಬಂಧ ಸತೀಶ್ ಜಾರಕಿಹೊಳಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಪತ್ರ ಬರೆದಿದ್ದು ವಿವಿ ವತಿಯಿಂದ ನನಗೆ ನೀಡಿದಂತಹ ಗೌರವ ಡಾಕ್ಟರೇಟ್‌ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ನನ್ನ ಈ ನಿರ್ಧಾರವನ್ನು ಅನ್ಯತ ಭಾವಿಸದೆ ನಾನು ಸಂಪೂರ್ಣ ಮನಸ್ಸಿನಿಂದ ಕೈಗೊಂಡ ನಿರ್ಧಾರವಾಗಿದ್ದು, ಈ ತೀರ್ಮನವನ್ನು ಸ್ವಾಗತಿಸುತ್ತೀರೆಂದು ಭಾವಿಸುವುದಾಗಿ ಹೇಳಿದ್ದಾರೆ.

ಗೌರವ ಡಾಕ್ಟರೇಟ್‌ ಪದವಿಯನ್ನು ನನಗೆ ಪ್ರದಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದೇನೆ. ಅದನ್ನು ಕಾರ್ಯರೂಪಕ್ಕೆ ತರುವಂತಹ ಗುರುತರವಾದ ಹೊಣೆಗಾರಿಕೆ ನನ್ನ ಮೇಲಿದೆ. ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶ ಅವಶ್ಯಕತೆ ಇರುತ್ತದೆ ಎಂದಿದ್ದಾರೆ.

ರಾಜ್ಯ ಮುಕ್ತ ವಿವಿ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ಮಾರ್ಚ್ 27ರಂದು ವಿವಿಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಗೌರವ ಪದವಿಯನ್ನು ನೀಡುವುದರ ಮೂಲಕ ಸನಾನಿಸಿದ ವ್ಯವಸ್ಥಾಪನ ಮಂಡಳಿಗೆ ನಾನು ಹುತ್ಪೂರ್ತಕ ಅಬಾರಿಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಯೋಗ ದಿನಾಚರಣೆ | ದೇಹದ ನಿಯಂತ್ರಣಕ್ಕೆ ಯೋಗಾಭ್ಯಾಸ ಅಗತ್ಯ: ಮಾಲತಿ ಡಿ.

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ  ಬಪ್ಪಳಿಗೆಯ ಅಂಬಿಕಾ…

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನಲ್ಲಿ ತಲೆಯೆತ್ತಲಿರುವ ‘ಸಿಂಧೂರವನ’ |ಪ್ರತಿಯೊಂದು ಗಿಡಕ್ಕೂ ಒಬ್ಬೊಬ್ಬ ಕಾರ್ಗಿಲ್ ಯೋಧನ ಹೆಸರು!

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…