ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮರಾಟಿ ಯುವ ವೇದಿಕೆ ಕೊಂಬೆಟ್ಟು ಇದರ ವತಿಯಿಂದ ದೂಮಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಮರಾಟಿ ಯುವ ವೇದಿಕೆಯ ವತಿಯಿಂದ ಶಾಲಾ ಮಕ್ಕಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಕೊಡೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮರಾಟಿ ಯುವ ವೇದಿಕೆಯ ಪದಾಧಿಕಾರಿಗಳು ಮತ್ತು ಸದಸ್ಯರು, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು, ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.