Gl
ಶಿಕ್ಷಣ

ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಿಸಿದ ಉಡುಪಿ ಡಿಸಿ!!

ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ದಂದು (ಜೂನ್ 13) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ ಜೂನ್ 12: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ದಂದು (ಜೂನ್ 13) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

rachana_rai
Pashupathi
akshaya college
Balakrishna-gowda

ಉಳಿದಂತೆ ಎಲ್ಲಾ ಪದವಿ ಪೂರ್ವ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

pashupathi

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಮರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.

  1. ವಿಧ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವ ಹಾಗಿಲ್ಲ
  2. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲವೇ ಸುರಕ್ಷಿತವಾಗಿ ತಲುಪುವ ಬಗ್ಗೆ, ಗಮನವಹಿಸುವುದು.
  3. ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
  4. ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ, ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು
  5. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ನೀರು ಇರುವ ತನ್ನು ಪ್ರದೇಶ, ಕೆರೆ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.
  6. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ಸುರಕ್ಷತೆಯನ್ನು ನೋಡಿಕೊಳ್ಳುವುದು.

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…

ಕೌಡಿಚ್ಚಾರಿನಲ್ಲಿ ಧರ್ಮ ಶಿಕ್ಷಣ ಉದ್ಘಾಟನೆ | ಮನುಷ್ಯನನ್ನು ಮನುಷ್ಯತ್ವಕ್ಕೇರಿಸುವ ಶಿಕ್ಷಣ ಅಗತ್ಯ: ಸುಬ್ರಮಣ್ಯ ನಟ್ಟೋಜ

ಪುತ್ತೂರು: ನಮ್ಮನ್ನು ನಿರ್ಗತಿಕರನ್ನಾಗಿ ಮಾಡಿದ ಬ್ರಿಟಿಷ್ ಅಧಿಕಾರಿಗಳನ್ನು ವೈಭವೀಕರಿಸುವ…