ಶಿಕ್ಷಣ

ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿಗಾಗಿ ಯೋಗ ಅಗತ್ಯ: ಸುಬ್ರಮಣ್ಯ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ

ಸ್ಪರ್ಧಾತ್ಮಕ ಯುಗದಲ್ಲಿ ಜಗತ್ತಿನಲ್ಲಿ ಯೋಗ ಹಾಗೂ ಅಧ್ಯಾತ್ಮದಲ್ಲಿ ತೊಡಗಿಸಿಕೊಳ್ಳದಿದ್ದರೆ ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿ ಗಳಿಸಿಕೊಳ್ಳುವುದು ಕಷ್ಟ ಸಾಧ್ಯ. ಹಾಗಾಗಿ ಪಠ್ಯ ಶಿಕ್ಷಣದೊಂದಿಗೆ ಯೋಗ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಒದಗಿಸಿಕೊಡುವುದು ಅಗತ್ಯ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜಗತ್ತಿನಲ್ಲಿ ಯೋಗ ಹಾಗೂ ಅಧ್ಯಾತ್ಮದಲ್ಲಿ ತೊಡಗಿಸಿಕೊಳ್ಳದಿದ್ದರೆ ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿ ಗಳಿಸಿಕೊಳ್ಳುವುದು ಕಷ್ಟ ಸಾಧ್ಯ. ಹಾಗಾಗಿ ಪಠ್ಯ ಶಿಕ್ಷಣದೊಂದಿಗೆ ಯೋಗ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಒದಗಿಸಿಕೊಡುವುದು ಅಗತ್ಯ. ಯಾಕೆಂದರೆ ಯೋಗದ ಜತೆ ದೊರಕುವ ಶಿಕ್ಷಣವೇ ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಯೋಗ ತರಬೇತಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಹೊಸದಾಗಿ ಸಂಸ್ಥೆಗೆ ದಾಖಲಾತಿ ಹೊಂದಿದ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ, ಸುದರ್ಶನ ಕ್ರಿಯೆಯ ತರಬೇತಿ ನೀಡುವುದು ಹಾಗೂ ತದನಂತರ ಯೋಗದ ಜೊತೆಗೆ ದೈನಂದಿನ ಪಠ್ಯ ಶಿಕ್ಷಣದ ಪ್ರಾರಂಭ ಮಾಡುವುದು ಅಂಬಿಕಾ ಸಂಸ್ಥೆಯಲ್ಲಿ ನಡೆದುಬಂದಿದೆ. ಪಠ್ಯದ ಜೊತೆಗೆ ಯೋಗವನ್ನೂ ವಿದ್ಯಾಥಿಗಳಿಗೆ ಕಲಿಸಿಕೊಡುವ ಶಿಕ್ಷಣವನ್ನು ಪ್ರಾರಂಭಿಸಿದ್ದು ಅಂಬಿಕಾದ ಪ್ರಥಮಗಳಲ್ಲಿ ಒಂದಾಗಿದೆ ಎಂದು ನುಡಿದರು.
ಆರ್ಟ್ ಆಫ್ ಲಿವಿಂಗ್ನ ಜಿಲ್ಲಾ ಸಂಚಾಲಕಿ ದೀಪಿಕಾ ಹಾಗೂ ಹಿರಿಯ ಅನುಭವಿ ಶಿಕ್ಷಕಿ ಆಶಾ ರವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಯೋಗ ದಿನಾಚರಣೆ | ದೇಹದ ನಿಯಂತ್ರಣಕ್ಕೆ ಯೋಗಾಭ್ಯಾಸ ಅಗತ್ಯ: ಮಾಲತಿ ಡಿ.

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ  ಬಪ್ಪಳಿಗೆಯ ಅಂಬಿಕಾ…

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನಲ್ಲಿ ತಲೆಯೆತ್ತಲಿರುವ ‘ಸಿಂಧೂರವನ’ |ಪ್ರತಿಯೊಂದು ಗಿಡಕ್ಕೂ ಒಬ್ಬೊಬ್ಬ ಕಾರ್ಗಿಲ್ ಯೋಧನ ಹೆಸರು!

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…