tamanvi
ಶಿಕ್ಷಣ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಯೋಗವು ಭಾರತದ  ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆ. ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವನ್ನು ಪಡೆಯಲು ಪ್ರಾಚೀನ ಮಾರ್ಗವಾಗಿದೆ. ‘ಯೋಗ’ ಎಂಬ ಪದದ ಅರ್ಥ ಒಗ್ಗೂಡಿಸುವುದು. ಮನುಷ್ಯನು ತನ್ನ ಮನಸ್ಸು, ದೇಹ ಮತ್ತು ಆತ್ಮವನ್ನು ಒಟ್ಟಿಗೆ ತರಲು ಪ್ರಯತ್ನಿಸುವ ಪ್ರಕ್ರಿಯೆಯಾಗಿದೆ.ಈ ಏಕತೆಯು ಪ್ರಜ್ಞೆಯೊಂದಿಗೆ ದೇಹದ ಅಂತಿಮ ಒಕ್ಕೂಟವನ್ನು ಸೂಚಿಸುತ್ತದೆ ಮತ್ತು ಹೀಗಾಗಿ ನಿರ್ಣಾಯಕ ಶಾಂತಿಯನ್ನು ಪಡೆಯುತ್ತದೆ.”ಎಂದು ಪುತ್ತೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಯೋಗಶಿಕ್ಷಕರಾದ  ಶ್ರೀಮತಿ  ಶರಾವತೀ  ರವಿನಾರಾಯಣ ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಯೋಗದ ಪ್ರಾಮುಖ್ಯತೆಯನ್ನು ತಿಳಿಸುತ್ತಾ ಮಾತನಾಡಿದರು.

ವಾಸ್ತವವಾಗಿ ಯೋಗ ಎಂಬುದು ಶರೀರ,ಮನಸ್ಸು ಮತ್ತು ಆತ್ಮದ ಒಂದು ಕನ್ನಡಿಯಾಗಿ ವರ್ತಿಸುತ್ತದೆ. ಹಾಗೂ ನಮ್ಮನ್ನು ನಾವು ಕಂಡುಕೊಳ್ಳುವುದಕ್ಕೆ ಮಧ್ಯವರ್ತಿಯಾಗಿ ಕೆಲಸ ಮಾಡುತ್ತದೆ.ಜೀವನದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದ, ಸಂತೋಷ, ಯಶಸ್ಸು ಎಲ್ಲವೂ ಕೈಗೂಡಬೇಕೆಂದರೆ ಯೋಗಾಭ್ಯಾಸವು ಅನಿವಾರ್ಯವಾಗಿರುತ್ತದೆ.” ಎಂದು ಹೇಳಿದರು.

ಯೋಗವು ಮನಸ್ಸು ಮತ್ತು ದೇಹದ ಏಕತೆಯನ್ನು,  ಚಿಂತನೆ ಮತ್ತು ಕ್ರಿಯೆಯನ್ನು, ಸಂಯಮ ಮತ್ತು ಪೂರೈಸುವಿಕೆಯನ್ನು, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಾಮರಸ್ಯವನ್ನು, ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಸಮಗ್ರ ವಿಧಾನವನ್ನು ಸಾಕಾರಗೊಳಿಸುತ್ತದೆ. ಎಂದು ಹೇಳಿದರು.

ಪುತ್ತೂರಿನ ಆದಾಯ ತೆರಿಗೆ ಕಛೇರಿಯಲ್ಲಿ ಟ್ಯಾಕ್ಸ್ ಅಸಿಸ್ಟೆಂಟ್ ಆಗಿರುವ ತೇಜಸ್ವಿ ಮಕಿನ್,  ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಶಶಿಕಲಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ವಿವಿಧ ಯೋಗಾಸನದ ಪ್ರಕಾರಗಳನ್ನು ವಿದ್ಯಾರ್ಥಿಗಳಿಗೆ ಶರಾವತೀ ರವಿನಾರಾಯಣ ಇವರು ತಿಳಿಸಿದರು.

ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಅರ್ಚನಾ ಸ್ವಾಗತಿಸಿ, ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…