pashupathi
ಶಿಕ್ಷಣ

RUDSET:ಮಹಿಳೆಯರಿಗೆ ಟೈಲರಿಂಗ್‌ ಉಚಿತ ತರಬೇತಿಗೆ ಅರ್ಜಿ ಆಹ್ವಾನ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ಷಯ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಡೆರಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮಹಿಳೆಯರಿಗೆ ಟೈಲರಿಂಗ್ ಕುರಿತ 31 ದಿನಗಳ ಉಚಿತ ತರಬೇತಿಯು ಜುಲೈ 26 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುತ್ತದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್ಡೆಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ.ಸಂ. 9740982585, 9241482541, 9113880324


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…