pashupathi
ಶಿಕ್ಷಣ

ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅಭಿಷೇಕ್ ಹರ್ಷ, ಕಾರ್ಯದರ್ಶಿಯಾಗಿ ಸನಿಕ ಪಿ. ರೈ

tv clinic
ನರೇಂದ್ರ ಪಪೂ ಕಾಲೇಜಿನ 2025-26 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ತೆಂಕಿಲ ನರೇಂದ್ರ ಪಪೂ ಕಾಲೇಜಿನ 2025-26 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಅಭಿಷೇಕ್ ಹರ್ಷ ಪಿ. ಜೆ., ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಸನಿಕ ಪಿ. ರೈ , ಜೊತೆ ಕಾರ್ಯದರ್ಶಿಯಾಗಿ ಪ್ರಥಮ ವಿಜ್ಞಾನ ವಿಭಾಗದ ಸಿಂಧು ಚುನಾಯಿತರಾದರು.
ಕ್ರೀಡಾ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಸಾತ್ವಿಕ್ ಹೆಚ್.ಕೆ., ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಪ್ರತೀಕ್ಷಾ ಆಯ್ಕೆಯಾದರು.
ಈ ಪ್ರಕ್ರಿಯೆಯನ್ನು ನರೇಂದ್ರ ಪ.ಪೂ. ಕಾಲೇಜಿನ ಪ್ರಾಂಶುಪಾಲರಾ ಪ್ರಸಾದ್ ಶ್ಯಾನಭಾಗ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ಎನ್., ಮಧುರಾ, ರುಚಿತಾಕೃಷ್ಣ, ರೇಖಾ ನಡೆಸಿಕೊಟ್ಟರು.
ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ಸಹಕರಿಸಿದರು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಶುಭಹಾರೈಸಿ, ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಮುಂದುವರಿಯಬೇಕು ಎಂದು ಕಿವಿಮಾತು ಹೇಳಿದರು.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…