tamanvi
ಶಿಕ್ಷಣ

ಬಪ್ಪಳಿಗೆ ಆಂಬಿಕಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಪರಿಷತ್ ಉದ್ಘಾಟನೆ | ಚುನಾವಣೆಯಿಂದ ಪ್ರಜಾಪ್ರಭುತ್ವದ ಬಗೆಗೆ ಅರಿವು : ಡಾ. ಚಂದ್ರಶೇಖರ್

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಗಳ 2025-26ನೇ ಸಾಲಿನ ವಿದ್ಯಾರ್ಥಿ ಪರಿಷತ್ ಅನ್ನು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಮಂಗಳವಾರ ಉದ್ಘಾಟಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಗಳ 2025-26ನೇ ಸಾಲಿನ ವಿದ್ಯಾರ್ಥಿ ಪರಿಷತ್ ಅನ್ನು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಮಂಗಳವಾರ ಉದ್ಘಾಟಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೂಡಬಿದಿರೆಯ ಪಶುವೈದ್ಯ ಡಾ. ಚಂದ್ರಶೇಖರ್ ಅವರು ಮಾತನಾಡಿ ವಿದ್ಯಾರ್ಥಿ ಪರಿಷತ್ ಎಂಬುದು ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿಯ ನಡುವೆ ಕೊಂಡಿಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಚುನಾವಣೆಯನ್ನು ನಡೆಸುವ ಕಾರ್ಯವನ್ನು ಶಿಕ್ಷಣ ಸಂಸ್ಥೆಗಳು ಸಾಕಾರಗೊಳಿಸಿದಾಗ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿಯುವುದಕ್ಕೆ ಸಾಧ್ಯವಾಗುತ್ತದೆ ಎಂದು ಹೇಳಿದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸುವುದು ಶಿಕ್ಷಣ ಸಂಸ್ಥೆಯ ಜವಾಬ್ದಾರಿಯಾಗಿದೆ. ಉತ್ತಮ ವಿದ್ಯಾರ್ಥಿ ನಾಯಕರು ಸಂಸ್ಥೆಯ ಪ್ರಗತಿಗೆ ಪೂರಕವಾದ ಮಹತ್ತರವಾದ ಕೆಲಸಗಳನ್ನು ಜತೆಗಿರುವ ವಿದ್ಯಾರ್ಥಿಗಳಿಂದ ಮಾಡಿಸಬಹುದು. ಕಾಲೇಜಿನ ಶಿಸ್ತು ಮತ್ತು ಘನತೆಯನ್ನು ಹೆಚ್ಚಿಸುವ ಕೆಲಸಗಳು ವಿದ್ಯಾರ್ಥಿ ನಾಯಕರಿಂದ ಆಗಬೇಕಾಗಿದೆ ಎಂದರು.
ಅAಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳಾದ ಸುಧನ್ವ ಸುದರ್ಶನ್ ಶಾಲಾ ನಾಯಕನಾಗಿ, ರಕ್ಷಾ ಎಸ್. ಎಸ್ ಶಾಲಾ ನಾಯಕಿಯಾಗಿ, ಗೃಹಮಂತ್ರಿಯಾಗಿ ೯ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್.ಜಿ, ಶಿಸ್ತು ಪಾಲನಾ ಮಂತ್ರಿಯಾಗಿ ವಂಶಿಕಾ ಬಿ. ರೈ, ಕ್ರೀಡಾ ಮಂತ್ರಿಯಾಗಿ ಭಾರ್ಗವ್ ಎಸ್. ರೈ, ಶಿಕ್ಷಣ ಮಂತ್ರಿಯಾಗಿ ೮ನೇ ತರಗತಿಯ ವಿದ್ಯಾರ್ಥಿ ಶ್ರೀನಿಕ್ ಎಸ್. ಆಚಾರ್ಯ ,ಸಾಂಸ್ಕೃತಿಕ ಮಂತ್ರಿಯಾಗಿ ಅನ್ವಿತಾ.ಎಸ್, ಸಂವಹನ ಮಂತ್ರಿಯಾಗಿ ೭ನೇ ತರಗತಿಯ ವಿದ್ಯಾರ್ಥಿನಿ ಹರ್ಷಲ್ ಡಿ.ರೈ, ಆರೋಗ್ಯ ಮಂತ್ರಿಯಾಗಿ ಸಾನ್ವಿ. ಜಿ, ನೀರಾವರಿ ಮಂತ್ರಿಯಾಗಿ ಸುಧನ್ವಾ ಕೆ, ವಿರೋಧ ಪಕ್ಷದ ನಾಯಕರಾಗಿ ತನ್ವಿ ಹಾಗೂ ಪ್ರಜನ್ ಸಂಸ್ಥೆಯ ಪ್ರಾಂಶುಪಾಲೆ ಮಾಲತಿ ಡಿ. ನೇತೃತ್ವದಲ್ಲಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದರು.
ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷೆಯಾಗಿ ಆಯ್ಕೆಯಾದ ಶ್ರೀಲಕ್ಷ್ಮೀ ಸುರೇಶ್, ಉಪಾಧ್ಯಕ್ಷ ಎಸ್ ಚಿನ್ಮಯ್, ಕಾರ್ಯದರ್ಶಿ ಕೆ ಎಲ್ ಶಶಾಂಕ್ ಹಾಗೂ ಜೊತೆ ಕಾರ್ಯದರ್ಶಿ ವೈಷ್ಣವಿ ಎಸ್ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್..ಇವರ ನೇತೃತ್ವದಲ್ಲಿ ಪ್ರತಿಜ್ಞಾ ವಿಧಿ ಕೈಗೊಂಡರು.
ನಂತರ ನಾಲ್ಕು ಶಾಲಾ ಹೌಸ್ಗಳ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು. ಐರಾವತ ಗುಂಪಿನ ನಾಯಕನಾಗಿ ಪ್ರಣಿತ್, ನಾಯಕಿಯಾಗಿ ವಿವಿಕ್ತಾ ರೈ, ಕಾಮಧೇನು ಗುಂಪಿನ ನಾಯಕನಾಗಿ ವಿಹಾನ್ ಕೃಷ್ಣ, ನಾಯಕಿಯಾಗಿ ಸಾನ್ವಿ.ಆರ್, ಅಮೃತ ಗುಂಪಿನ ನಾಯಕನಾಗಿ ಜ್ಯೋತಿರಾದಿತ್ಯ, ನಾಯಕಿಯಾಗಿ ಮನಸ್ವಿ, ಕಲ್ಪವೃಕ್ಷ ಗುಂಪಿನ ನಾಯಕನಾಗಿ ಪ್ರಿಯಾಂಶುರಾವ್, ನಾಯಕಿಯಾಗಿ ಮಂದಿರಾ ಕಜೆ ಇವರು ಅತಿಥಿಗಳಿಂದ ಗುಂಪಿನ ಬಾವುಟಗಳನ್ನು ಸ್ವೀಕರಿಸಿದರು.
ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಹಿರಣ್ಮೆöÊ ಸ್ವಾಗತಿಸಿ, ಭವಿಷ್ಯ ಅತಿಥಿಗಳ ಪರಿಚಯ ಮಾಡಿದರು. ಅದಿತಿ ವಂದಿಸಿದರು. ಕುವಿರಾ ಹಾಗೂ ಆದ್ಯತಾ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…