ಪುತ್ತೂರು: ಮಾರುಕಟ್ಟೆಯು ವಿವಿಧ ರೀತಿಯ ಉತ್ಪನ್ನಗಳು ಮತ್ತು ವ್ಯವಹಾರ ಕಲ್ಪನೆಗಳಿಂದ ತುಂಬಿರುವಾಗ, ಹೊಸತನವನ್ನು ಮಾಡಲು ಹಾಗೂ ವಿಶಿಷ್ಟವಾದ ಮತ್ತು ಉತ್ತಮವಾದದ್ದನ್ನು ಮಾಡಲು ಯಾವಾಗಲೂ ಅವಕಾಶವಿರುತ್ತದೆ ಮರಿಕೆ ಹೋಂ ಇಂಡಸ್ಟ್ರಿ ಮಾಲಕ ಸುಹಾಸ್ ಮರಿಕೆ ಹೇಳಿದರು.
ಇವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ “ ವತಿಯಿಂದ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.
ವ್ಯವಹಾರದ ಯಶಸ್ಸಿಗಾಗಿ ಅದರ ಸ್ವರೂಪದ ಬಗ್ಗೆ ಮಾತನಾಡಿದ ಅವರು, ವ್ಯವಹಾರದ ಯಶಸ್ಸು ಯೋಜನೆ ಮತ್ತು ಕಠಿಣ ಪರಿಶ್ರಮವನ್ನು ಅವಲಂಬಿಸಿರುತ್ತದೆ. ಅದ್ಭುತವಾದ ವ್ಯವಹಾರ ಕಲ್ಪನೆಯನ್ನು ಹೊಂದಿರುವುದು ಒಂದು ವಿಷಯ ಆದರೆ ವ್ಯವಹಾರದ ಯಶಸ್ಸು ಕಲ್ಪನೆಯ ಕಾರ್ಯಗತಗೊಳಿಸುವಿಕೆಯ ಮೇಲೆ ಅವಲಂಬಿತವಾಗಿರುತ್ತದೆ. ಎಂದರು.
ವ್ಯವಹಾರದ ಯಶಸ್ಸಿಗೆ ಉತ್ತಮ ಯೋಜನೆ ಅಥವಾ ಕಾರ್ಯತಂತ್ರವನ್ನು ರೂಪಿಸುವುದು ಅತ್ಯಗತ್ಯ. ವ್ಯವಹಾರದ ಗುರಿಗಳು ಮತ್ತು ಉದ್ದೇಶಗಳು ಅವುಗಳನ್ನು ಸಾಧಿಸುವುದರ ಮಾರ್ಗಗಳನ್ನು ವಿವರಿಸುವ ಸಮಗ್ರ ವ್ಯಾಪಾರ ಯೋಜನೆಯ ಬಗ್ಗೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನುಭಾಗ್, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಶಷ್ಟಿಕಾ ಮತ್ತು ಶಾನ್ವಿ ಸ್ವಾಗತಿಸಿ, ವಂದಿಸಿದರು.