ಶಿಕ್ಷಣ

ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ | ಗುರು ಹಿರಿಯರಿಗೆ ಋಣಿಗಳಾಗಿರಬೇಕು : ಡಿವೈಎಸ್‌ಪಿ ಅರುಣ್ ಎನ್. ಗೌಡ

ವಿದ್ಯಾರ್ಥಿಗಳು ಗುರು ಹಿರಿಯರಿಗೆ ಋಣಿಗಳಾಗಿ ಜೀವನವನ್ನು ಸಾಗಿಸಬೇಕು. ವಿದ್ಯಾರ್ಥಿ ಜೀವನವನ್ನು ಅತ್ಯುತ್ತಮವಾಗಿ ಬಳಸಿಕೊಂಡು ಮುನ್ನಡೆಯಬೇಕು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿದ್ಯಾರ್ಥಿಗಳು ಗುರು ಹಿರಿಯರಿಗೆ ಋಣಿಗಳಾಗಿ ಜೀವನವನ್ನು ಸಾಗಿಸಬೇಕು. ವಿದ್ಯಾರ್ಥಿ ಜೀವನವನ್ನು ಅತ್ಯುತ್ತಮವಾಗಿ ಬಳಸಿಕೊಂಡು ಮುನ್ನಡೆಯಬೇಕು. ಸಂಸ್ಕೃತಿ, ಸಂಸ್ಕಾರ ಮಾತ್ರವಲ್ಲದೆ ಪರಸ್ಪರ ಸಹಕಾರದ ತತ್ತ÷್ವಗಳಡಿ ಉತ್ಕೃಷ್ಟ ಶಿಕ್ಷಣವನ್ನು ತಮ್ಮದಾಗಿಸಿಕೊಂಡು ದೇಶಸೇವೆಯೆಡೆಗೆ ಗಮನ ಹರಿಸಬೇಕು ಎಂದು ಪುತ್ತೂರಿನ ಡಿವೈಎಸ್‌ಪಿ ಅರುಣ್ ಎನ್. ಗೌಡ ಹೇಳಿದರು
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ೨೦೨೫-೨೬ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.
ಮತ್ತೋರ್ವ ಅತಿಥಿ ಪುತ್ತೂರಿನ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಮಾತನಾಡಿ ಜ್ಞಾನಕ್ಕೆ ಸರಿ ಸಮಾನ ಇನ್ನೊಂದಿಲ್ಲ. ಇತ್ತೀಚಿನ ದಿನಗಳಲ್ಲಿ ನಮ್ಮ ಸುಂದರ ಜೀವನವನ್ನು ಹಾಳು ಮಾಡುವ ಅಸ್ತçವಾಗಿ ಮೊಬೈಲ್ ಕೆಲಸ ಮಾಡುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ಮೊಬೈಲ್‌ನಿಂದ ದೂರವಿದ್ದು ಅಧ್ಯಯನ ನಡೆಸಬೇಕು. ಕಾನೂನು ಎಲ್ಲದಕ್ಕಿಂತ ದೊಡ್ಡದು. ಅದನ್ನು ಯಾರೂ ಉಲ್ಲಂಘಿಸುವAತಿಲ್ಲ. ಆದ್ದರಿಂದಹಕ್ಕು, ಅಧಿಕಾರ, ಕಾನೂನು, ಕರ್ತವ್ಯಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದಿರಲೇಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಖಾಕಿ ಎಂದರೆ ಹೆಮ್ಮೆ, ಮೈ ರೋಮಾಂಚನವಾಗುತ್ತದೆ. ದೇಶವನ್ನು ಕಾಯುವವರು  ಸೈನಿಕರಾದರೆ ಸಮಾಜವನ್ನು ಕಾಯುವವರು ಆರಕ್ಷಕರು. ಸಮಾಜ ಮುಖಿಯಾಗಿ ರಕ್ಷಣೆ ಕೊಡುವ ಪೊಲೀಸರಿಗೆ ಎಲ್ಲರೂ ಸದಾ ಕೃತಜ್ಞರಾಗಿರಬೇಕು. ನಾಳಿನ ಸಮಾಜ ಕಟ್ಟುವ ಕೆಲಸ ವಿದ್ಯಾರ್ಥಿಗಳದ್ದು ಎಂದು ನುಡಿದರು.
ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಪ್ರಮಾಣವಚನ ಬೋಧಿಸಿದರು. ಅತಿಥಿಗಳು ನಿಕಟಪೂರ್ವ ವಿದ್ಯಾರ್ಥಿ ನಾಯಕ ಪವನ್ ಭಾರದ್ವಾಜ ಅವರ ಬಳಿಯಿಂದ ಶಾಲಾ ಧ್ವಜವನ್ನು ನೂತನ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ರಕ್ಷಕ ಶಿಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷ ಶಿವರಾಮ ಆಳ್ವಾ, ವಿದ್ಯಾರ್ಥಿ ನಾಯಕರಾದ ಜಶ್ಮಿ, ಶ್ರೀಕೃಷ್ಣ ನಟ್ಟೋಜ, ಸನ್ನಿಧಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಶ್ರೀದೇವಿ, ಅನನ್ಯ, ಸಮನ್ವಿಕ, ಸೃಷ್ಟಿ, ಶಮಾ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಮುಕ್ತಾ ಸ್ವಾಗತಿಸಿ, ಸಾನ್ವಿ ವಂದಿಸಿದರು. ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿದರು.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಯೋಗ ದಿನಾಚರಣೆ | ದೇಹದ ನಿಯಂತ್ರಣಕ್ಕೆ ಯೋಗಾಭ್ಯಾಸ ಅಗತ್ಯ: ಮಾಲತಿ ಡಿ.

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ  ಬಪ್ಪಳಿಗೆಯ ಅಂಬಿಕಾ…

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನಲ್ಲಿ ತಲೆಯೆತ್ತಲಿರುವ ‘ಸಿಂಧೂರವನ’ |ಪ್ರತಿಯೊಂದು ಗಿಡಕ್ಕೂ ಒಬ್ಬೊಬ್ಬ ಕಾರ್ಗಿಲ್ ಯೋಧನ ಹೆಸರು!

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…