ಪುತ್ತೂರು: ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ಹಾಗೂ ಪೊಳಲಿ ಗಿರಿಪ್ರಕಾಶ್ ತಂತ್ರಿ ಅವರಿಗೆ ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿಯ ಆಗಮ ಘಟಿಕೋತ್ಸವ-2025ರಲ್ಲಿ ವಾತುಲಾಗಮ ಪ್ರವೀಣ ಪದವಿ ಪ್ರಧಾನ ಮಾಡಲಾಯಿತು.
ಜುಲೈ 19ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಏಳು ಆಗಮ ವಿಭಾಗಗಳ ಸುಮಾರು 2000 ವಿದ್ಯಾರ್ಥಿಗಳಲ್ಲಿ ಅತ್ಯಧಿಕ ಅಂಕ ಗಳಿಸಿದ 43 ವಿದ್ಯಾರ್ಥಿಗಳಿಗೆ ಈ ಪದವಿ ನೀಡಲಾಯಿತು.
ಪೊಳಲಿ ಗಿರಿಪ್ರಕಾಶ್ ತಂತ್ರಿ ಹಾಗೂ ಪುತ್ತೂರಿನ ವಾಸ್ತುತಜ್ಞ ಪಿ.ಜಿ ಜಗನ್ನಿವಾಸ ರಾವ್ ಅವರಿಗೆ ಕರ್ನಾಟಕ ಸರಕಾರದ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಹಾಗೂ ಆಯುಕ್ತ ಡಾ.ವೆಂಕಟೇಶ ಎಂ.ವಿ. ಐಎಎಸ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಮೊದಲಾದವರ ಉಪಸ್ಥಿತಿಯಲ್ಲಿ ಆಗಮ ಶಾಸ್ತ್ರ ಪ್ರಮಾಣ ಪತ್ರ, ಪದಕ ಹಾಗೂ ನಗದು ನೀಡಿ ಗೌರವಿಸಲಾಯಿತು.
ಪಿ.ಜಿ. ಜಗನ್ನಿವಾಸ ರಾವ್ ಈ ಹಿಂದೆ ಮಂಗಳೂರು ವಿಶ್ವವಿದ್ಯಾಲಯದಿಂದ ವೇದ ತಂತ್ರಾಗಮ ಡಿಪ್ಲೋಮಾ ಪದವಿ ಪಡೆದಿದ್ದಾರೆ.