ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ, ಸಂಸ್ಕೃತ ವಿಭಾಗ ಹಾಗೂ ಅಧ್ವಯ ಸಾಹಿತ್ಯ ಸಂಘದ ಆಶ್ರಯದಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಹೊಸತಾಗಿ ದಾಖಲಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಮತ್ತು ಈ ವರ್ಷದಿಂದ ಕಾರ್ಯನಿರ್ವಹಿಸಲಿರುವ ಹೊಸ ಸಂಸ್ಥೆ ಅಕ್ಷಯ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ಸಂಸ್ಕೃತ ವಿದ್ಯಾರ್ಥಿಗಳಿಗೆ ಸಂಸ್ಕೃತ ಶಿಕ್ಷಣದ ಸವಾಲುಗಳ ಅರಿವು ಮೂಡಿಸುವ ಸಲುವಾಗಿ ಪ್ರಜ್ಞಾನಮ್ ಅರಿವು ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಪ್ರಾಂಶುಪಾಲರಾದ ಗಂಗಾ ರತ್ನ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಇಂತಹ ಕಾರ್ಯಕ್ರಮಗಳ ಉದ್ದೇಶವನ್ನು ತಿಳಿಯಪಡಿಸಿ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಮಾತನಾಡಿ, ಸಂಸ್ಕೃತದ ಬಳಕೆ ಎಲ್ಲಾ ಭಾಷೆಗಳಲ್ಲೂ ಕಾಣಬಹುದೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾಲೇಜಿನ ಆಡಳಿತ ಅಧಿಕಾರಿ ಅರ್ಪಿತ್ ಟಿ.ಎ. ಮುಖ್ಯ ಅತಿಥಿಯಾಗಿದ್ದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಸಂತ ಅಲೋಷಿಯಸ್ ಕಾಲೇಜಿನ ಸಂಸ್ಕೃತ ಉಪನ್ಯಾಸಕಿ ಸುರೇಖಾ ಮಾತನಾಡಿ, ವಿದ್ಯಾರ್ಥಿಗಳಿಗೆ ಬೇಕಾದ ಜೀವನ ಮೌಲ್ಯಗಳು ಹಾಗೂ ಶೈಕ್ಷಣಿಕ ಸವಾಲುಗಳನ್ನು ಸಂಸ್ಕೃತದಲ್ಲಿ ಕಾಣಬಹುದು ಎಂದರು.
ರಮ್ಯಶ್ರೀ ಪ್ರಾರ್ಥಿಸಿದರು. ರಕ್ಷಾ ಟಿ.ಆರ್. ಸ್ವಾಗತಿಸಿ, ಆಯುಷ್ ಶೆಟ್ಟಿ ವಂದಿಸಿದರು. ಕಾಲೇಜಿನ ಸಂಸ್ಕೃತ ವಿಭಾಗ ಮುಖ್ಯಸ್ಥೆ ಸಾಯಿ ಕೃಪಾ ಕೆ ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿನಿ ಅಪೇಕ್ಷಾ ಟಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.