ಶಿಕ್ಷಣ

ಜುಲೈ 26: ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯೋತ್ಸವ | ಕಾರ್ಗಿಲ್ ಯೋಧರಿಗೆ ಸ್ಮರಣಿಕೆ ನೀಡಿ ವಿಜಯೋತ್ಸವ, ರಕ್ಷಾಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

 

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಜುಲೈ 26ರಂದು ಬೆಳಗ್ಗೆ  9.15ಕ್ಕೆ ಕಿಲ್ಲೆ  ಮೈದಾನದ ಎದುರಿನ ಅಮರ್  ಜವಾನ್  ಜ್ಯೋತಿ  ಸ್ಮಾರಕದ ಬಳಿ ಕಾರ್ಗಿಲ್  ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ.

ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಂ.ಕೆ. ನಾರಾಯಣ ಭಟ್ ಅಧ್ಯಕ್ಷತೆ ವಹಿಸುವರು. ಯುವ ವಾಗ್ಮಿ ಶ್ರೀದೇವಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಜಿ.ಎಲ್. ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿಗಳಿಂದ ಮಾದರಿ ನಡೆ:

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಸಂಘ ಈ ಬಾರಿಯ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಮಾದರಿ ಕಾರ್ಯವೊಂದನ್ನು ನಡೆಸಿ ಹಲವರ ಮೆಚ್ಚುಗೆಗೆ ಪಾತ್ರವಾಗಿದೆ.

ಅಂಬಿಕಾ ಶಿಕ್ಷಣ ಸಂಸ್ಥೆಗಳು ಪ್ರತಿ ವರ್ಷ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಿಕೊಂಡು ಬರುತ್ತಿವೆ. ಭಾರತೀಯ ಸೇನೆ, ಯೋಧರ ಸಾಹಸಗಾಥೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡುತ್ತಿವೆ. ಇದರಿಂದ ಪ್ರೇರೇಪಣೆಗೊಂಡ ವಿದ್ಯಾರ್ಥಿ ಸಂಘ ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳ ಸ್ವಯಂಪ್ರೇರಿತ ಧನಸಹಾಯವನ್ನು ಪಡೆದು ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾದ ಮೂವರು ವೀರ ಯೋಧರಿಗೆ ಸ್ಮರಣಿಕೆಗಳನ್ನು ಕಳುಹಿಸಿಕೊಟ್ಟಿದೆ. ಜತೆಗೆ ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾದ ಬೆಂಗಳುರಿನ ಮಿಲಿಟರಿ ಬೆಟಾಲಿಯನ್ ಒಂದಕ್ಕೂ ಸ್ಮರಣಿಕೆಯನ್ನು ಕಳುಹಿಸಿಕೊಡಲಾಗಿದೆ.

ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿ ಅಪ್ರತಿಮ ಶೌರ್ಯ ಮೆರೆದು ಭಾರತೀಯ ಸೇನೆ ಕೊಡಮಾಡುವ ಅತ್ಯುಚ್ಚ ಗೌರವವಾದ ಪರಮವೀರ ಚಕ್ರ ಪುರಸ್ಕಾರ ಪಡೆದ ಕ್ಯಾಪ್ಟನ್ ಯೋಗೇಂದ್ರ ಸಿಂಗ್ ಯಾದವ್ ಹಾಗೂ ಅದೇ ಯುದ್ಧದಲ್ಲಿ ಭಾಗಿಯಾಗಿ ಸೇನಾ ಪದಕ ಪಡೆದ ಕ್ಯಾಪ್ಟನ್ ನವೀನ್ ನಾಗಪ್ಪ ಹಾಗೂ ಯುದ್ಧದಲ್ಲಿ ಭಾಗಿಯಾದ ಮತ್ತೋರ್ವ ಯೋಧ ಕಮಾಂಡರ್ ಶ್ಯಾಮರಾಜ್ ಇ.ವಿ. ಅವರಿಗೆ ಹಾಗೂ ಬೆಂಗಳೂರು ಬೆಟಾಲಯನ್‌ಗೆ ಈ ಸ್ಮರಣಿಕೆಗಳ್ನು ಕಳುಹಿಸಿಕೊಡಲಾಗಿದೆ.

ಜತೆಗೆ, ಸದ್ಯದಲ್ಲೇ ರಕ್ಷಾಬಂಧನ ದಿನವೂ ನಡೆಯಲಿರುವ ಹಿನ್ನೆಲೆಯಲ್ಲಿ ಸ್ಮರಣಿಕೆ ಜತೆಗೆ ರಕ್ಷೆಯನ್ನೂ ಜತೆಗಿರಿಸಿ ಹಾರೈಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಯೋಗ ದಿನಾಚರಣೆ | ದೇಹದ ನಿಯಂತ್ರಣಕ್ಕೆ ಯೋಗಾಭ್ಯಾಸ ಅಗತ್ಯ: ಮಾಲತಿ ಡಿ.

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ  ಬಪ್ಪಳಿಗೆಯ ಅಂಬಿಕಾ…

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನಲ್ಲಿ ತಲೆಯೆತ್ತಲಿರುವ ‘ಸಿಂಧೂರವನ’ |ಪ್ರತಿಯೊಂದು ಗಿಡಕ್ಕೂ ಒಬ್ಬೊಬ್ಬ ಕಾರ್ಗಿಲ್ ಯೋಧನ ಹೆಸರು!

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…

ಸುಳ್ಯ ಕೆವಿಜಿ ಎಂಬಿಎ ದಲ್ಲಿ ವ್ಯವಹಾರ ತರಬೇತಿ – ಪ್ರೇರಣೆ| ಎಐ ಸವಾಲು ಎದುರಿಸಲು ಸಿದ್ಧರಾಗಬೇಕು ಡಾ. ಉಜ್ವಲ್ ಯು.ಜೆ.

ಸುಳ್ಯ: ಜೆಸಿಐ ಬೆಳ್ಳಾರೆ ಹಾಗೂ ಸುಳ್ಯ ಕೆವಿಜಿ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಎಂಬಿಎ…