ಶಿಕ್ಷಣ

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವೃತ್ತಿ ಮಾರ್ಗದರ್ಶನ | ವಿದ್ಯಾರ್ಥಿ ಜೀವನದಲ್ಲಿಯೇ ಗುರಿ ನಿರ್ಧರಿಸಬೇಕು: ಕರ್ನಲ್ ಶರತ್ ಭಂಡಾರಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪ್ರತಿಯೊಬ್ಬರಿಗೂ ಜೀವನದಲ್ಲಿ ಪ್ರೇರಣೆ ಅತ್ಯಂತ ಅಗತ್ಯ. ಒಳ್ಳೆಯ ಉದ್ಯೋಗದ ಮೂಲಕ ಅತ್ಯುತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳಿರುವಾಗಲೇ ಯೋಚಿಸಿ ಗುರಿ ನಿಶ್ಚಯಿಸಿ ಮುಂದುವರಿಯಬೇಕು. ಸ್ಪಷ್ಟವಾದ ಲಕ್ಷ್ಯ, ಪೋಷಕರ – ಅಧ್ಯಾಪಕರ ಮಾರ್ಗದರ್ಶನ, ನಿರಂತರ ಸ್ವ ಪ್ರಯತ್ನ ಇದ್ದಾಗ ಸಾಧನೆ ಸಾಧ್ಯ ಎಂದು ವಿಶ್ರಾಂತ ಬಾರತೀಯ ಸೇನೆಯ ವಿಶ್ರಾಂತ ಯೋಧ ಕರ್ನಲ್ ಶರತ್ ಭಂಡಾರಿ ಹೇಳಿದರು.

akshaya college

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಬುಧವಾರ ನಡೆದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಭಾರತೀಯ ಸೈನ್ಯಕ್ಕೆ ಸೇರುವ ವಿಧಾನ, ಮಿಲಿಟರಿಗೆ ಸೇರಿದ ನಂತರ ಸಿಗುವ ಗೌರವ, ಸೌಲಭ್ಯ, ನಿವೃತ್ತರಾದ ನಂತರ ಸಿಗುವ ಸವಲತ್ತುಗಳ ಬಗ್ಗೆ ವಿವರವಾಗಿ ಮಾಹಿತಿಯನ್ನು ನೀಡಿದರಲ್ಲದೆ ಮಿಲಿಟರಿಗೆ ಹೋದರೆ ಸಾಯುತ್ತೇವೆ ಎನ್ನುವ ಅಂಜಿಕೆ ಬೇಡ. ಧೈರ್ಯದಿಂದ ದೇಶ ಸೇವೆ ಮಾಡುವುದಲ್ಲದೆ ದೇಶ ರಕ್ಷಣೆ ಮಾಡಬೇಕು. ಸೇನೆಯಿಂದ ನಿವೃತ್ತರಾದ ನಂತರ ಸಮಾಜ ಸೇವೆ ಮಾಡಿ ಬದುಕಿನ ಸಾರ್ಥಕ್ಯ ಕಂಡುಕೊಳ್ಳಬೇಕು ಎಂದು ನುಡಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ  ನಟ್ಟೋಜ ಮಾತನಾಡಿ, ಪ್ರತಿಯೊಬ್ಬರೂ ಪಾರಂಪರಿಕ ಶಿಕ್ಷಣದ ಜೊತೆಗೆ ಮಿಲಿಟರಿ ಶಿಕ್ಷಣ ಪಡೆಯುವಂತಾಗಬೇಕು. ಭಾರತೀಯ ಮಿಲಿಟರಿ ಎಂಬುದು ಭ್ರಷ್ಟಾಚಾರ ಇಲ್ಲದ ಅತ್ಯಂತ ಪವಿತ್ರ ಕ್ಷೇತ್ರ. ಯಾವುದೇ ಪದವಿ ಓದಿದರೂ ಸೇನೆಗೆ ಸೇರುವ ಪ್ರಯತ್ನ ಮಾಡಿ. ಸ್ವಲ್ಪ ಸಮಯವಾದರೂ ದೇಶ ಸೇವೆ ಮಾಡಬೇಕು ಎಂದು ಕರೆ ನೀಡಿದರು.

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯ ಸುರೇಶ ಶೆಟ್ಟಿ, ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಶ್ರೀದೇವಿ, ಅನನ್ಯ, ಸಮನ್ವಿಕಾ, ಸೃಷ್ಟಿ, ನಿರೀಕ್ಷಾ ಪ್ರಾರ್ಥಿಸಿದರು. ಮುಕ್ತಾ ರೈ ಸ್ವಾಗತಿಸಿ, ಪ್ರತೀತಾ ವಂದಿಸಿ, ಶ್ರೀನಿಧಿ ಕಾರ್ಯಕ್ರಮ  ನಿರೂಪಿಸಿದರು. ಪ್ರಯೋಗಾಲಯ ಸಹಾಯಕ ಮುರಳಿ ಮೋಹನ ಸಹಕರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಯೋಗ ದಿನಾಚರಣೆ | ದೇಹದ ನಿಯಂತ್ರಣಕ್ಕೆ ಯೋಗಾಭ್ಯಾಸ ಅಗತ್ಯ: ಮಾಲತಿ ಡಿ.

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ  ಬಪ್ಪಳಿಗೆಯ ಅಂಬಿಕಾ…

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನಲ್ಲಿ ತಲೆಯೆತ್ತಲಿರುವ ‘ಸಿಂಧೂರವನ’ |ಪ್ರತಿಯೊಂದು ಗಿಡಕ್ಕೂ ಒಬ್ಬೊಬ್ಬ ಕಾರ್ಗಿಲ್ ಯೋಧನ ಹೆಸರು!

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…