ಶಿಕ್ಷಣ

ಮಕ್ಕಳಲ್ಲಿ ಕನಸು ಬಿತ್ತು ಜೊತೆ ಮೌಲ್ಯವನ್ನು ತುಂಬಿ | ಸವಣೂರು ವಿದ್ಯಾರಶ್ಮಿಯಲ್ಲಿ 14ನೇ ವರ್ಷದ ಸ್ಥಾಪಕರ ದಿನಾಚರಣೆ ಶೀಂಟೂರು ಸ್ಮೃತಿ ಕಾರ್ಯಕ್ರಮ ಉದ್ಘಾಟಿಸಿ ಬಿಇಓ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಐಎಎಸ್‌ ಐಪಿಎಸ್ ನಂತಹ ಹುದ್ದೆಗಳಲ್ಲಿ ಜಿಲ್ಲೆಯ ಅತೀ ಕಡಿಮೆ ಜನರಿದ್ದಾರೆ. ಇಂತಹ ಹುದ್ದೆಗಳನ್ನು ಪಡೆಯಬೇಕಾದರೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಗತ್ಯತೆಯ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಮಕ್ಕಳಲ್ಲಿ ಕನಸು ಬಿತ್ತುವ ಕೆಲಸದ ಜತೆಗೆ ಮೌಲ್ಯಗಳನ್ನು ತುಂಬುವ ಚಿಂತನೆ ಹೆಚ್ಚಾಗಬೇಕಾಗಿದೆ. ಬಡತನ ಎಂಬುವುದು ಯಾವ ವಿಶ್ವವಿದ್ಯಾಲಯದಲ್ಲೂ ಕಲಿಸದ ಪಾಠಗಳನ್ನು ಕಲಿಸುತ್ತದೆ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆ‌ರ್ ಅಭಿಪ್ರಾಯಪಟ್ಟರು.

akshaya college

ಗುರುವಾರ ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾಚೇತನ ಸಭಾಂಗಣದಲ್ಲಿ ನಡೆದ 14ನೇ ವರ್ಷದ ಸ್ಥಾಪಕರ ದಿನಾಚರಣೆ ಶೀಂಟೂರು ಸ್ಮೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಕ್ತಿಯ ವ್ಯಕ್ತಿತ್ವವನ್ನು ಮೇರುಸ್ಥಿತಿಗೆ ಒಯ್ಯುವ ಶಿಕ್ಷಣ ನಮ್ಮ ಜೀವನದ ಅತೀ ಪ್ರಾಮುಖ್ಯವಾದ ಅಂಶವಾಗಿದೆ. ಶಿಕ್ಷಣ ಇಲ್ಲದಿದ್ದರೆ ಬದುಕೇ ಇಲ್ಲ ಎಂಬ ಸ್ಥಿತಿ ಬರಲಿದೆ. ಹಾಗಾಗಿ ಮಕ್ಕಳಲ್ಲಿ ಪುಸ್ತಕಪ್ರೀತಿಯನ್ನು ಬೆಳೆಸುವ ಕಾರ್ಯ ಆಗಬೇಕಾಗಿದೆ ಇಂದಿನ ಮಕ್ಕಳಿಗೆ ತಂದೆಯ ಮಹತ್ವವೇ ಗೊತ್ತಿಲ್ಲ ಎಂದರು.

ಶೀಂಟೂರು ಸನ್ಮಾನ ಸ್ವೀಕರಿಸಿದ ನಿವೃತ್ತ ಯೋಧ ಕರ್ನಲ್ ರಾಜೇಶ್ ಹೊಳ್ಳ ಎಸ್.ಎಂ ಅವರು ಮಾತನಾಡಿ, ಬದುಕಿನಲ್ಲಿ ವಿದ್ಯೆ ಅತೀ ಮುಖ್ಯ. ಅಮೇರಿಕಾದಲ್ಲಿ ಶಾಲೆಗೆ ಮಕ್ಕಳನ್ನು ಕಳುಹಿಸದಿದ್ದರೆ ಅವರ ತಂದೆತಾಯಿಗಳಿಗೆ ಶಿಕ್ಷೆ ನೀಡುತ್ತಾರೆ. ಅಂತಹ ಕಾನೂನು ಭಾರತದಲ್ಲಿಯೂ ಬರಬೇಕು. ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಸಮಾಜದ ಉನ್ನತಿಯಾಗಬೇಕಾದರೆ ಪೋಷಕರು ಮಿಲಿಟರಿಯೂ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಮಕ್ಕಳನ್ನು ಕಳುಹಿಸುವ ವ್ಯವಸ್ಥೆ ಅನುಷ್ಟಾನವಾಗಬೇಕು. ಮಕ್ಕಳನ್ನು ದೈಹಿಕವಾಗಿ ಮಾತ್ರವಲ್ಲ ಮಾನಸಿಕವಾಗಿಯೂ ಬಲಿಷ್ಠಗೊಳಿಸಿದಾಗ ದೇಶಭಕ್ತಿ-ದೇಶಪ್ರೇಮದ ಜತೆಗೆ ಪ್ರಾಮಾಣಿಕತೆಯ ಚಿಂತನೆ ಹೆಚ್ಚಾಗುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ನ್ಯಾಯವಾದಿ ಅಶ್ವಿನ್ ಎಲ್ ಶೆಟ್ಟಿ ಅವರು ಮಾತನಾಡಿ, ಯಾವುದೇ ಕ್ಷೇತ್ರದಲ್ಲಿ ಬೆಳೆಯಬೇಕಾದರೂ ಕಷ್ಟ ಪಡಬೇಕು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಷ್ಟ ಪಟ್ಟಾಗ ಮಾತ್ರ ಶಿಕ್ಷಣಸಂಸ್ಥೆ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ. ಕಷ್ಟವನ್ನು ಸಂಭ್ರಮಿಸುವ ಮನೋಭಾವ ನಮ್ಮಲ್ಲಿ ಬೆಳೆಯಬೇಕಾಗಿದೆ ಎಂದರು.

ನಿವೃತ್ತ ಯೋಧ ಕರ್ನಲ್ ರಾಜೇಶ್ ಹೊಳ್ಳ ಅವರಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರಿ ಸಂಸ್ಥೆಯ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ ಸನ್ಮಾನಿಸಿದರು. ಸಿಂಡಿಕೇಟ್‌ ಬ್ಯಾಂಕಿನ ನಿವೃತ್ತ ಮೆನೇಜರ್ ಸೂಂತೋಡು ಹೂವಯ್ಯ ಶೀಂಟೂರು ಸಂಸ್ಮರಣೆ ಮಾಡಿದರು. ಸವಣೂರು ಸೀತಾರಾಮ ರೈ ಅವರು ಶೀಂಟೂರು ಶಿಷ್ಯವೇತನ ವಿತರಿಸಿದರು.

ವೇದಿಕೆಯಲ್ಲಿ ಸವಣೂರು ಸೀತಾರಾಮ ರೈ ಅವರ ಪತ್ನಿ ಕಸ್ತೂರಿ ಎಸ್ ರೈ, ಮಮತಾ ರೈ ಡಿಂಬ್ರಿ, ರಶ್ಮೀ ಅಶ್ವಿನ್ ಶೆಟ್ಟಿ ಅವರು ಉಪಸ್ಥಿತರಿದ್ದರು.

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಸೀತಾರಾಮ ರೈ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಎನ್.ಜಯಪ್ರಕಾಶ್ ರೈ ವಂದಿಸಿದರು. ವಿದ್ಯಾರ್ಥಿ ಶಂತನುಕೃಷ್ಣ ಸಂವಿಧಾನ ಪೀಠಿಕೆ ವಾಚಿಸಿದರು. ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ರಾಜಲಕ್ಷಿಂ ಎಸ್.ರೈ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ಉಪನ್ಯಾಸಕಿ ಸುಮಾ ಎಸ್, ಶಿಕ್ಷಕಿಯರಾದ ಚೇತನಾ, ಲಿಖಿತಾ ಎಂ.ಎನ್, ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕಿ ಪ್ರತಿಭಾ ಎಸ್ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಯೋಗ ದಿನಾಚರಣೆ | ದೇಹದ ನಿಯಂತ್ರಣಕ್ಕೆ ಯೋಗಾಭ್ಯಾಸ ಅಗತ್ಯ: ಮಾಲತಿ ಡಿ.

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ  ಬಪ್ಪಳಿಗೆಯ ಅಂಬಿಕಾ…

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನಲ್ಲಿ ತಲೆಯೆತ್ತಲಿರುವ ‘ಸಿಂಧೂರವನ’ |ಪ್ರತಿಯೊಂದು ಗಿಡಕ್ಕೂ ಒಬ್ಬೊಬ್ಬ ಕಾರ್ಗಿಲ್ ಯೋಧನ ಹೆಸರು!

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…

ಸುಳ್ಯ ಕೆವಿಜಿ ಎಂಬಿಎ ದಲ್ಲಿ ವ್ಯವಹಾರ ತರಬೇತಿ – ಪ್ರೇರಣೆ| ಎಐ ಸವಾಲು ಎದುರಿಸಲು ಸಿದ್ಧರಾಗಬೇಕು ಡಾ. ಉಜ್ವಲ್ ಯು.ಜೆ.

ಸುಳ್ಯ: ಜೆಸಿಐ ಬೆಳ್ಳಾರೆ ಹಾಗೂ ಸುಳ್ಯ ಕೆವಿಜಿ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಎಂಬಿಎ…