pashupathi
ಶಿಕ್ಷಣ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಾರದಾ ಪೂಜೆ, ಆಯುಧ ಪೂಜೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ಶಾರದಾ ಪೂಜೆ ಹಾಗೂ ಆಯುಧಪೂಜೆ, ವಾಹನ ಪೂಜೆ ನಡೆಯಿತು.

akshaya college

ವೈದಿಕರಾದ ಅನಂತ ಭಟ್ ಉರ್ಲಾಂಡಿ ಹಾಗೂ ಸುಬ್ರಹ್ಮಣ್ಯ ಭಟ್ ವೀರಮಂಗಲ ಅವರು ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಶ್ರೀಕೃಷ್ಣ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಕೆ, ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ, ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಎಂ, ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ., ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು.

ಶಾರದಾ ಪೂಜೆಯ ಬಳಿಕ ಅಂಬಿಕಾ ಪರಿವಾರಕ್ಕೆ ಸೇರಿದ ಹಲವಾರು ವಾಹನಗಳಿಗೆ ಆಯುಧಪೂಜೆ ಪ್ರಯುಕ್ತ ವಾಹನಪೂಜೆ ನೆರವೇರಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…