ಶಿಕ್ಷಣ

ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ದತ್ತಿ ನಿಧಿ ಸ್ಥಾಪನೆ

ಈ ಸುದ್ದಿಯನ್ನು ಶೇರ್ ಮಾಡಿ

ವಿದ್ಯಾ ಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಮತ್ತು ಸೂರ್ಯ ಚೈತನ್ಯ  ಗ್ಲೋಬಲ್ ಅಕಾಡೆಮಿ ಸ್ಕೂಲ್ ಕುತ್ಯಾರು ಆಶ್ರಯದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ವಿದ್ಯಾ ಭಾರತಿ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಹಮಿಲನ – 2025 ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ಜರಗಿತು.

gl

ಸಂಸ್ಥೆಯ ಮಹಾಪೋಷಕರಾದ ಆನೆಗುಂದಿ ಶ್ರೀ ಸರಸ್ವತಿ ಪೀಠದ ಅನಂತ ಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರಿಗೆ ರೂಪಾಯಿ 1,50,000 ದತ್ತಿನಿಧಿಯನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ದಿವಾಕರ ಆಚಾರ್ಯ ಗೇರುಕಟ್ಟೆ ಹಸ್ತಾಂತರಿಸಿದರು. ಇದರ ವಾರ್ಷಿಕ ಬಡ್ಡಿಯಿಂದ ಪ್ರತಿ ವರ್ಷವೂ 8, 9 ಮತ್ತು 10ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ದಿವಾಕರ ಆಚಾರ್ಯ ಅವರ ತಾಯಿ – ತಂದೆ ವಾರಿಜ ಆಚಾರ್ ಮತ್ತು ಕೆ. ಮೋನಪ್ಪ ಆಚಾರ್ಯ ಗೇರುಕಟ್ಟೆ ಬೆಳ್ತಂಗಡಿ ಇವರ ಸ್ಮರಣೆಯಲ್ಲಿ ಸಂಸ್ಥೆಗೆ ಪ್ರಥಮವಾಗಿ ದತ್ತಿನಿಧಿ ನೀಡಲಾಯಿತು. ದಿವಾಕರ ಆಚಾರ್ಯ ಮತ್ತು ಭಾರತಿ ಯಂ. ಯಲ್ ದಂಪತಿಯನ್ನು ಸ್ವಾಮಿಜಿ ಫಲ ಮಂತ್ರಾಕ್ಷತೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಆಸೆಟ್ ಅಧ್ಯಕ್ಷ ಬಿ.ಸೂರ್ಯಕುಮಾರ ಹಳೆಯಂಗಡಿ, ಕಾರ್ಯದರ್ಶಿ ಗುರುರಾಜ್. ಕೆ ಮಂಗಳೂರು, ವಿದ್ಯಾ ಭಾರತಿಯ ಅಧ್ಯಕ್ಷ ಪಾಂಡುರಂಗ ಪೈ ಸಿದ್ದಾಪುರ, ಪ್ರಧಾನ ಕಾರ್ಯದರ್ಶಿ ಮಹೇಶ ಹೈಕಾಡಿ, ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠ ಕುತ್ಯಾರಿನ ಪ್ರಧಾನ ಕಾರ್ಯದರ್ಶಿ ಎಂ.ಬಿ. ಲೋಕೇಶ್ ಆಚಾರ್ಯ, ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಅನಿತಾ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…