tamanvi
ಶಿಕ್ಷಣ

ಅಕ್ಷಯ ಪದವಿ ಕಾಲೇಜಿನಲ್ಲಿ ‘ಅಟರ್ನೆಸ್ 2K25’ ಪಿಯು ಫೆಸ್ಟ್ ಸಂಪನ್ನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಅಕ್ಷಯ ಪದವಿ ಕಾಲೇಜಿನಲ್ಲಿ ನ. 21ರಂದು ದ.ಕ ಹಾಗೂ ಕೊಡಗು ಜಿಲ್ಲಾಮಟ್ಟದ ನಾಲ್ಕನೇ ವರ್ಷದ ಅಟರ್ನೆಸ್ 2K25 ಪಿಯು ಫೆಸ್ಟ್ ಯಶಸ್ವಿಯಾಗಿ ಸಂಪನ್ನಗೊಂಡಿತು.

18 ಕಾಲೇಜುಗಳ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕಲಾವತಿ ಜಯಂತ್ ಕಾರ್ಯಕ್ರಮ ಉದ್ಘಾಟಿಸಿ ಶುಭ ನುಡಿಗಳನ್ನಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಮಾರೋಪ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಕಬಡ್ಡಿ ತರಬೇತುದಾರ, ಬ್ಯಾಂಕ್ ಆಫ್ ಬರೋಡ ಪುತ್ತೂರು ಮ್ಯಾನೇಜರ್ ಪ್ರಶಾಂತ್ ರೈ ಕೈಕಾರ, ಶಿಕ್ಷಣದ ಜೊತೆಗೆ ಶಿಕ್ಷಣೇತರ ಚಟುವಟಿಕೆಗಳಲ್ಲಿ ಭಾಗವಹಿಸಿ, ದೈಹಿಕ ಮತ್ತು ಮಾನಸಿಕ ಅರೋಗ್ಯವನ್ನು ಕಾಪಾಡಿಕೊಳ್ಳಿ ಎಂದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಿಟ್ಲ್ ಪ್ಲವರ್ ಶಾಲಾ ಸಹಶಿಕ್ಷಕ ಬಾಲಕೃಷ್ಣ ರೈ ಪೋರ್ದಲ್ ಸನ್ಮಾನ ಸ್ವೀಕರಿಸಿ, ಅಕ್ಷಯ ಸಂಸ್ಥೆಯು ಬೆಳೆದು ಬಂದ ಹಾದಿ ಮತ್ತು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಾಧನೆಯನ್ನು ಕುರಿತು ಮಾತನಾಡಿ ಶುಭಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಜಯಂತ ನಡುಬೈಲ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿ­ಪರ ಶಿಕ್ಷಣ ದೊರಕುವಂತೆ ಮಾಡುವ ಉದ್ದೇಶದಿಂದ ವಿದೇಶಗಳಿಗೆ ಇಂಟರ್ನ್‌ಶಿಪ್‌ಗೆ ತೆರಳುವ ವ್ಯವಸ್ಥೆಯನ್ನು ಕಾಲೇಜು ಮಾಡುತ್ತಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ವೃತ್ತಿಪರ ಶಿಕ್ಷಣದ ಮಹತ್ವವನ್ನು ವಿವರಿಸಿದರು ಹಾಗೂ ಭಾಗವಹಿಸಿದ ಎಲ್ಲಾ ಕಾಲೇಜುಗಳಿಗೆ ಹಾಗೂ ಉಪನ್ಯಾಸ ವೃಂದಕ್ಕೆ ಅಭಿನಂದನೆ ಸಲ್ಲಿಸಿದರು.

ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಗಂಗಾರತ್ನ, ಕಾಲೇಜು ನಾಯಕ ರಾಕೇಶ್ ತೃತೀಯ ಐ.ಡಿ ಉಪಸ್ಥಿತರಿದ್ದರು.

ಅಟರ್ನೆಸ್ 2K25 ಪ್ರಶಸ್ತಿ :

ಅಟರ್ನೆಸ್ 2K25 ಸಮಗ್ರ ಪ್ರಶಸ್ತಿಯನ್ನು ಎನ್.ಎಮ್.ಪಿ.ಯು ಕಾಲೇಜು ಸುಳ್ಯ ಪಡೆದುಕೊಂಡಿತು.  ಪ್ರಥಮ ರನ್ನರ್ ಆಪ್ ಪ್ರಶಸ್ತಿಯನ್ನು ಎಸ್. ಡಿ. ಎಮ್ ಕಾಲೇಜು ಉಜಿರೆ ಹಾಗೂ  ದ್ವಿತೀಯ ರನ್ನರ್ ಆಪ್ ಪ್ರಶಸ್ತಿಯನ್ನು ಕೆ. ಎಸ್ ಗೌಡ ಕಾಲೇಜು ನಿಂತಿಕಲ್ಲು ಪಡೆದುಕೊಂಡಿತು. ಎಲ್ಲಾ ಸ್ಪರ್ಧೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾಳುಗಳ ಭಾಗವಹಿಸುವಿಕೆ.: ಎನ್.ಎಮ್.ಪಿ.ಯು ಕಾಲೇಜು ಸುಳ್ಯ ಇದಕ್ಕೆ ಸೂಪರ್ ಸ್ಟಾರ್ ಪ್ರಶಸ್ತಿಯನ್ನು ನೀಡಲಾಯಿತು.

ಪದವಿ ಕಾಲೇಜಿನ ಪ್ರಾಚಾರ್ಯ ಸಂಪತ್ ಪಕ್ಕಳ ಸ್ವಾಗತಿಸಿ,  ಉಪನ್ಯಾಸಕಿಯರಾದ ಕಾವ್ಯಶ್ರೀ   ಮತ್ತು ದೀಕ್ಷಾ ರೈ ವಂದಿಸಿದರು. ಶೃತ ಮತ್ತು ರಶ್ಮಿ ಕಾರ್ಯಕ್ರಮ ನಿರ್ವಹಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…