ಶಿಕ್ಷಣ

ಮಾದಕ ವ್ಯಸನಗಳಿಂದ ದೂರವಿದ್ದು ಆರೋಗ್ಯಯುತ ಜೀವನ ನಡೆಸಿ | ಮಾದಕ ದ್ರವ್ಯ ವ್ಯಸನ ತಡೆಗಟ್ಟುವಿಕೆ ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾ ತರಬೇತುದಾರ ಶ್ರೀಕಾಂತ್ ಬಿರಾವು

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಾಧನೆಯ ಹಾದಿಯಲ್ಲಿ ಯುವಕರು ದಾರಿ ತಪ್ಪುತ್ತಿದ್ದಾರೆ. ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದು, ಭಾರತದ ಅತಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಎಷ್ಟೋ ಯುವಜನರು ಮಾನಸಿಕ, ದೈಹಿಕ ಖಿನ್ನತೆಗೆ ಒಳಗಾಗಿ ಜೀವನವನ್ನೇ ಹಾಳು ಮಾಡಿಕೊಂಡಿದ್ದಾರೆ. ಆದ್ದರಿಂದ ಯುವಜನರು ಆರೋಗ್ಯಕ್ಕೆ ಹಾನಿಕಾರಕವಾದ ಮಾದಕ ವ್ಯಸನಗಳಿಂದ ದೂರವಿರಿ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರ ಶ್ರೀಕಾಂತ್ ಬಿರಾವು ಹೇಳಿದರು.

core technologies

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ದಕ್ಷಿಣ ಕನ್ನಡ, ವಿದ್ಯಮಾತಾ ಅಕಾಡೆಮಿ ಪುತ್ತೂರು ಇದರ ಸಹಯೋಗದೊಂದಿಗೆ ಮಾದಕ ದ್ರವ್ಯ ವ್ಯಸನ ತಡೆಗಟ್ಟುವಿಕೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

akshaya college

ಯುವಜನರು ತಮ್ಮ ಸುತ್ತಮುತ್ತಲಿನಲ್ಲಿ ಜನರಿಗೆ ಮಾದಕ ದ್ರವ್ಯ ವ್ಯಸನದಿಂದಾಗಿವ ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ನಶ ಮುಕ್ತಾ ಭಾರತ ವಾಗಲು ಶ್ರಮಿಸಬೇಕಾಗಿದೆ ಎಂದರು.

ವಿದ್ಯಮಾತಾ ಅಕಾಡೆಮಿ ನಿರ್ದೇಶಕ ಭಾಗ್ಯೇಶ್ ರೈ ಮಾತನಾಡಿ, ಯುವಜನರ ಉಲ್ಲಾಸ ಉತ್ಸಾಹವನ್ನು ಮಾದಕ ವ್ಯಸನಗಳು ಬಲಿ ತೆಗೆದುಕೊಳ್ಳುತ್ತಿದೆ. ಆದ್ದರಿಂದ ಯಾರಿಂದಲೂ ನಾವು ಪ್ರೇರೆಪಿತರಾಗದೇ ದುಶ್ಚಟಗಳಿಂದ ದೂರವಿರಬೇಕು. ಇದರ ಅರಿವನ್ನು ತಮ್ಮ ‌ತಮ್ಮ ಗ್ರಾಮಗಳಲ್ಲಿ ಅರಿವು ಮೂಡಿಸಿ ಎಂದರು.

ಕಾರ್ಯಕ್ರಮದಲ್ಲಿ ತರಬೇತುದಾರ ಚಂದ್ರಕಾಂತ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಯಶಸ್ಸು ನಮ್ಮ ಆಯ್ಕೆ, ಅವಕಾಶವಲ್ಲ: ಡಾ.ಎಂ.ಎಸ್.ಮೂಡಿತ್ತಾಯ | ಅಂಬಿಕಾ ಪ.ಪೂ.ವಿದ್ಯಾಲಯಗಳ ವಾರ್ಷಿಕೋತ್ಸವ – ಮಾನಸೋಲ್ಲಾಸ 2025-26

ಪುತ್ತೂರು: ಪ್ರಪಂಚದ ನೂರ ತೊಂಬತ್ತಮೂರಕ್ಕೂ ಹೆಚ್ಚಿನ ರಾಷ್ಟ್ರಗಳ ಮಧ್ಯೆ ಭಾರತ ನಿರ್ಲಕ್ಷಿಸಲಾಗದ…