tamanvi
ಶಿಕ್ಷಣ

ಡಿ. 13: ಪಿ.ಉನ್ನಿಕೃಷ್ಣನ್, ಉತ್ತರಾ ಉನ್ನಿಕೃಷ್ಣನ್ ಅವರಿಂದ ಶಾಸ್ತ್ರೀಯ ಸಂಗೀತ | ಅಂಬಿಕಾ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವ ಅಂಗವಾಗಿ ವಿಶೇಷ ಕಾರ್ಯಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವದ ಅಂಗವಾಗಿ ರಾಷ್ಟ್ರಪ್ರಶಸ್ತಿ ವಿಜೇತ ದಕ್ಷಿಣ ಭಾರತದ ಖ್ಯಾತ ಗಾಯಕರಾದ ಪಿ.ಉನ್ನಿಕೃಷ್ಣನ್ ಹಾಗೂ ಅವರ ಪುತ್ರಿ ಉತ್ತರಾ ಉನ್ನಿಕೃಷ್ಣನ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಡಿಸೆಂಬರ್ 13ರಂದು ಸಂಜೆ 5.30ರಿಂದ ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿದೆ.

ಶಾಸ್ತ್ರೀಯ ಗಾಯನ ಕಾರ್ಯಕ್ರಮದಲ್ಲಿ ವಿದ್ವಾನ್ ನಿಶಾನ್ ಚಂದ್ರನ್ ಅವರು ವಾಯಲಿನ್‌ನಲ್ಲಿ, ವಿದ್ವಾನ್ ತುಮಕೂರು ಬಿ.ರವಿಶಂಕರ್ ಅವರು ಮೃದಂಗದಲ್ಲಿ, ವಿದ್ವಾನ್ ತುಮಕೂರು ಬಿ. ಶಶಿಶಂಕರ್ ಘಟಂನಲ್ಲಿ ಹಾಗೂ ವಿದ್ವಾನ್ ವಿಕ್ರಮ್ ಭಾರದ್ವಾಜ್ ಅವರು ಮೋರ್ಚಿಂಗ್ ಹಾಗೂ ರಿದಂಪಾಡ್‌ನಲ್ಲಿ ಸಹಕರಿಸಲಿದ್ದಾರೆ.

2024ರಲ್ಲಿ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ದಶಮಾನೋತ್ಸವ ಕಾರ್ಯಕ್ರಮ ನಡೆದಿದ್ದಾಗ ಖ್ಯಾತ ಯುವ ಗಾಯಕಿ ಸೂರ್ಯಗಾಯತ್ರಿ ಅವರಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೀಗ ರಜತ ಮಹೋತ್ಸವದ ನೆಲೆಯಲ್ಲಿ ಮತ್ತೀರ್ವರು ರಾಷ್ಟ್ರೀಯ ಮಟ್ಟದ ಗಾಯಕರು ಅಂಬಿಕಾ ಆವರಣಕ್ಕೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಸಾರ್ವಜನಿಕರಿಗೆ ಮುಕ್ತ ಹಾಗೂ ಉಚಿತ ಪ್ರವೇಶ ಕಲ್ಪಿಸಿಕೊಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…