ಪುತ್ತೂರು: ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಮಹಾಕಾವ್ಯಗಳಾದ ರಾಮಾಯಣ ಮಹಾಭಾರತದಲ್ಲಿ ಬರುವ ಒಳ್ಳೆಯ ಪಾತ್ರಗಳ ಗುಣವನ್ನು ಅಳವಡಿಸಿಕೊಳ್ಳಬೇಕು. ಸದ್ವಿಚಾರಗಳನ್ನು ಸ್ವೀಕರಿಸಿ ಅವರವರ ಕ್ಷೇತ್ರದಲ್ಲಿ ಪ್ರಬುದ್ಧರಾಗಿ, ಪ್ರಾಮಾಣಿಕರಾಗಿ, ಸಮರ್ಥರಾಗಿ ಬೆಳೆಯಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ ಹೇಳಿದರು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ಗೀತಾ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಭಗವದ್ಗೀತೆಯಲ್ಲಿ ನಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಇದೆ. ಆದ್ದರಿಂದ ವಿದ್ಯಾರ್ಥಿಗಳು ಭಗವದ್ಗೀತೆಯ ಅಧ್ಯಯನ ನಡೆಸಬೇಕು ಎಂದರಲ್ಲದೆ ವಿದ್ಯಾರ್ಥಿಗಳು ಅನುಸರಿಸಬೇಕಾದ ಕೆಲವು ಪ್ರಾಮುಖ್ಯ ವಿಚಾರಗಳ ಬಗೆಗೆ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ವಿಷ್ಣು ಸಹಸ್ರನಾಮ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ, ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.
ಜೀವಶಾಸ್ತ್ರ ಉಪನ್ಯಾಸಕ ವಿಷ್ಣು ಪ್ರದೀಪ ಕಾರ್ಯಕ್ರಮ ನಿರೂಪಿಸಿದರು.


























