ಶಿಕ್ಷಣ

ಶತಮಾನೋತ್ಸವ ಪಥದತ್ತ ಬನ್ನೂರು ಹಿ.ಪ್ರಾ. ಶಾಲೆ | ಜ. 4ಕ್ಕೆ ಶಾಲಾ ಶತಮಾನೋತ್ಸವಕ್ಕೆ ಚಾಲನೆ ಹಾಗೂ ಕಾಮಗಾರಿಗಳ ಶಿಲಾನ್ಯಾಸ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶತಮಾನದ ಹೊಸ್ತಿಲಲ್ಲಿರುವ ಬನ್ನೂರು ಹಿ.ಪ್ರಾ. ಶಾಲೆಯಲ್ಲಿ ಶಾಲಾ ಶತಮಾನೋತ್ಸವಕ್ಕೆ ಚಾಲನೆ ಹಾಗೂ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ ಜ. 4ರಂದು ಬೆಳಿಗ್ಗೆ 9ಕ್ಕೆ ನಡೆಯಲಿದೆ.

1927ರಲ್ಲಿ ಆರಂಭವಾದ ಈ ಶಾಲೆಯಲ್ಲಿ ಶತಮಾನೋತ್ಸವ ಪಥದತ್ತ ಸಮಾರಂಭವನ್ನು ಜಿಪಂ ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬನ್ನೂರು ಹಿ.ಪ್ರಾ. ಶಾಲೆ ಆಯೋಜಿಸಿದೆ.

ಬೆಳಿಗ್ಗೆ 9.30ಕ್ಕೆ ಶತಮಾನೋತ್ಸವದ ಚಾಲನಾ ಮೆರವಣಿಗೆಗೆ ಶತಮಾನೋತ್ಸವ ಸಮಿತಿ ಅಧ್ಯಕ್ಷ ಪಾಂಡುರಂಗ ಗೌಡ ಚಾಲನೆ ನೀಡಲಿದ್ದಾರೆ.

ಬೆಳಿಗ್ಗೆ 10ಕ್ಕೆ ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ, ಮಧ್ಯಾಹ್ನ ಸಹಭೋಜನ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನೇಶ್ ಸಾಲಿಯಾನ್ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…