tamanvi
ಶಿಕ್ಷಣ

ಯುವಜನತೆ ಡಿಜಿಟಲ್ ಸಾಕ್ಷರತೆಯ ರಾಯಭಾರಿಗಳಾಗಲಿ: ಅಮ್ಮಣ್ಣ ರೈ | ಪಾಪೆಮಜಲು ಶಾಲೆಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಸಮಯದ ಪಾಲನೆ ಅತ್ಯಂತ ಮುಖ್ಯ. ಶಿಸ್ತು ಮತ್ತು ಸೇವಾ ಮನೋಭಾವನೆಯಿಂದ ಮಾತ್ರ ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಸಾಧ್ಯ ಎಂದು ಪಾಪೆಮಜಲು ಸರ್ಕಾರಿ ಪ್ರೌಢಶಾಲೆಯ ಶಾಲಾ ಅಭಿವೃದ್ಧಿ ಸಮಿತಿಯ ಸ್ಥಾಪಕಾಧ್ಯಕ್ಷ ಹಾಗೂ ಮಾಜಿ ಸೈನಿಕ ಅಮ್ಮಣ್ಣ ರೈ ಕರೆ ನೀಡಿದರು.

ಅರಿಯಡ್ಕದ ಸ.ಪ್ರೌ.ಶಾಲೆ ಪಾಪೆಮಜಲಿನಲ್ಲಿ ಫೆಬ್ರವರಿ 3ರಿಂದ 9ರ ವರೆಗೆ ನಡೆಯಲಿರುವ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ರಾಷ್ಟ್ರೀಯ ಸೇವಾ ಯೋಜನೆಯ 2025-26ನೇ ಸಾಲಿನ ವಾರ್ಷೊಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ, ನನ್ನ ಭಾರತಕ್ಕಾಗಿ ಯುವಜನತೆ ಎಂಬ ಆಶಯದೊಂದಿಗೆ ಆಯೋಜಿಸಲಾದ ಈ ಶಿಬಿರದಲ್ಲಿ ಕಾಲೇಜಿನ ಶೈಕ್ಷಣಿಕ ಗುಣಮಟ್ಟ ಹಾಗೂ ಶಿಸ್ತಿನ ಕುರಿತು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ, ಅನುಭವವು ಮನುಷ್ಯನ ಬದುಕಿನ ದೃಷ್ಟಿಕೋನವನ್ನೇ ಬದಲಿಸುವ ಶಕ್ತಿ ಹೊಂದಿದೆ. ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳಿಗೆ ಕೇವಲ ಕೆಲಸವನ್ನಷ್ಟೇ ಕಲಿಸುವುದಿಲ್ಲ. ಬದಲಾಗಿ ಜೀವನದ ಪಾಠಗಳನ್ನು ಕಲಿಸುತ್ತವೆ. ಸೇವೆ ಎಂಬುದು ಮನದಾಳದಿಂದ ಬರಬೇಕು. ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಹಿತವಚನ ನೀಡಿದರು.

ಅಕ್ಷಯ ಕಾಲೇಜಿನ ಸಂಚಾಲಕ ಜಯಂತ ನಡುಬೈಲ್, ಪ್ರಮುಖರಾದ ಇಕ್ಬಾಲ್ ಹುಸೈನ್, ಮೋಹನದಾಸ್ ರೈ, ಶಿವಪ್ಪ ಕುಲಾಲ್, ಮೋನಪ್ಪ ಪೂಜಾರಿ, ಪುಷ್ಪಲತಾ ಪಾಪೆಮಜಲು, ತಿಲಕ್ ರೈ ಕುತ್ಯಾಡಿ ಹಾಗೂ ವಾಸು ಪೂಜಾರಿ ಗುಂಡ್ಯಡ್ಕ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಕೆ. ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ ಶಿಬಿರದ ಗುರಿ ಮತ್ತು ಉದ್ದೇಶಗಳನ್ನು ವಿವರಿಸಿದರು. ಘಟಕ ನಾಯಕ ಮನೀಶ್ ಸ್ವಾಗತಿಸಿದರು. ಯೋಜನಾಧಿಕಾರಿ ಪುಷ್ಪಾ ಎನ್. ವಂದಿಸಿದರು. ಘಟಕ ನಾಯಕಿ ಜೆ. ಲವಿಕಾ ಕಾರ‍್ಯಕ್ರಮ ನಿರೂಪಿಸಿದರು. ಏಳು ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿಶೇಷ ಯೋಜನೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು…