tamanvi
ಶಿಕ್ಷಣ

ಪಿಜಿ ನೀಟ್ 2025 ಸೀಟು ಹಂಚಿಕೆ, ಫಾರ್ಮಾ ಕೋರ್ಸ್ಗಳ ಅಪ್ಡೇಟ್ ನೀಡಿದ ಕೆಇಎ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ (PGNEET 2025) ವೈದ್ಯಕೀಯ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ಹಾಗೂ ಎಂ ಫಾರ್ಮಾ ಮತ್ತು ಡಿ ಫಾರ್ಮಾ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ  ಮಾಹಿತಿ ನೀಡಿದೆ.

ಪಿಜಿ ನೀಟ್ 2025 ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಫೆಬ್ರವರಿ 10ರಂದು ಬೆಳಗ್ಗೆ 8 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ.

ತಾತ್ಕಾಲಿಕ ಸೀಟು ಹಂಚಿಕೆಯನ್ನು ಫೆಬ್ರವರಿ 10ರಂದು ಸಂಜೆ 5 ಗಂಟೆ ಹಾಗೂ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಫೆಬ್ರವರಿ 11ರಂದು ಮಧ್ಯಾಹ್ನ 1 ಗಂಟೆ ನಂತರ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರ ಆಡಳಿತಾಧಿಕಾರಿ ತಿಳಿಸಿದ್ದಾರೆ. ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಲ್ಲಿ ಸೀಟು ಹಂಚಿಕೆಯಾದವರು ಇದೇ ಫೆಬ್ರವರಿ 12 ರಿಂದ 13 ರವರೆಗೆ ಶುಲ್ಕ ಪಾವತಿಸಲು ಅವಕಾಶ ಇದೆ.

ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಫೆಬ್ರವರಿ 14ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…