tamanvi
ಶಿಕ್ಷಣ

ಅಂಬಿಕಾದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿಶೇಷ ಯೋಜನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಇಪ್ಪತ್ತೆöÊದು ವರ್ಷಗಳನ್ನು ಪೂರ್ಣಗೊಳಿಸಿ ಬೆಳ್ಳಿಹಬ್ಬದ ಸಂಭ್ರಮದೊAದಿಗೆ ಮುನ್ನಡೆಯುತ್ತಿರುವ ಸವಿನೆನಪಿನಲ್ಲಿ 2026  – 27ನೇ ಸಾಲಿನಿಂದ ಸರ್ಕಾರಿ ಶಾಲೆಗಳ ಪ್ರತಿಭಾನ್ವಿತ ವಿದ್ಯಾಥಿಗಳಿಗೆ ಉಚಿತ ಶಿಕ್ಷಣ ಒದಗಿಸುವ ಯೋಜನೆಯನ್ನು ಹಮ್ಮಿಕೊಂಡಿದೆ. ಇದರನ್ವಯ ಸರಕಾರಿ ಶಾಲೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದ್ದರೆ ಅಂತಹವರಿಗೆ ಅತ್ಯುತ್ತಮ ಗುಣಮಟ್ಟದ ಪದವಿ ಪೂರ್ವ ವಿಜ್ಞಾನ ಅಥವಾ ವಾಣಿಜ್ಯ ಶಾಸ್ತç ಶಿಕ್ಷಣವನ್ನು ಒದಗಿಸಿಕೊಡಲಾಗುತ್ತದೆ. ಈ ಸೌಲಭ್ಯವು ಪ್ರತಿ ವರ್ಷವೂ ಹತ್ತು ಮಂದಿ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ.

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಈಗಾಗಲೇ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ರೂಪದಲ್ಲಿ ಸಾಕಷ್ಟು ಆರ್ಥಿಕ ನೆರವನ್ನು ಒದಗಿಸಿಕೊಡುತ್ತಿದೆ. 2010ರಿಂದಲೇ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುತ್ತಾ ಬಂದಿರುವ ಅಂಬಿಕಾ ಸಂಸ್ಥೆ ಕಳೆದ ಕೆಲವು ವರ್ಷಗಳಿಂದ ಪ್ರತಿವರ್ಷವೂ ಒಂದು ಕೋಟಿ ರೂಪಾಯಿಗಳಿಗಿಂತಲೂ ಅಧಿಕ ಹಣದ ನೆರವನ್ನು ವಿದ್ಯಾರ್ಥಿಗಳಿಗೆ ಕೊಡಮಾಡುತ್ತಿದೆ. ಸಹಸ್ರಾರು ವಿದ್ಯಾರ್ಥಿಗಳು ಈಗಾಗಲೇ ಈ ಆರ್ಥಿಕ ನೆರವಿನ ಪ್ರಯೋಜನಗಳನ್ನು ಪಡೆದುಕೊಂಡು ತಮ್ಮ ಬದುಕನ್ನು ರೂಪಿಸಿಕೊಂಡಿರುವುದು ಉಲ್ಲೇಖಾರ್ಹ. ಇದರೊಂದಿಗೆ ಇದೀಗ ಸರ್ಕಾರಿ ಶಾಲೆಗಳಲ್ಲಿನ ಪ್ರತಿಭಾನ್ವಿತ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕ ಹಾಗೂ ಕೋಚಿಂಗ್ ಶುಲ್ಕ ಒಳಗೊಂಡAತೆ ಉಚಿತ ಶಿಕ್ಷಣವನ್ನು ನೀಡುವ ಯೋಜನೆಗೆ ಇದೀಗ ಅಡಯಿಟ್ಟಿದೆ.

ಉಚಿತ ಶಿಕ್ಷಣದ ಅರ್ಹತೆ: ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ ಪೂರ್ಣಗೊಂಡ ನಂತರ ಅಂಬಿಕಾ ಸಂಸ್ಥೆಯಲ್ಲಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಒದಗಿಸಲಾಗುವುದು.

ಆಸಕ್ತ ವಿದ್ಯಾರ್ಥಿಗಳು   https://forms.gle/wK8ft2469PfV4NAdA ಈ ಗೂಗಲ್ ಲಿಂಕ್ ಮೂಲಕ ಮಾರ್ಚ್ ೫ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಎಪ್ರಿಲ್ 4ರಂದು ಬೆಳಗ್ಗೆ 9.30 ಗಂಟೆಗೆ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ: 9741481600, 9448835488.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…