tamanvi
ಶಿಕ್ಷಣ

ಬೆಳ್ತಂಗಡಿ: ತೆರೆದ ಟಿಪ್ಪರ್‌ನಲ್ಲಿ ಶಾಲಾ ಪ್ರವಾಸ!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಜೇನು ಕೃಷಿ ಅಧ್ಯಯನ ಪ್ರವಾಸದ ನೆಪದಲ್ಲಿ ಶಾಲಾ ಮಕ್ಕಳನ್ನು ತೆರೆದ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಪಾಯಕಾರಿಯಾಗಿ ಕರೆದೊಯ್ದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಂಜೆ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನಕ್ಕಾಗಿ ತೆರದ ಪಿಕಪ್ ಮತ್ತು ಟಿಪ್ಪರ್‌ನಲ್ಲಿ ಕರೆದೊಕೊಂಡು ಹೊಗಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಮಕ್ಕಳನ್ನು ತೆರೆದ ವಾಹನದಲ್ಲಿ ಸಾಗಿಸುವುದು ಅಪಾಯಕಾರಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಕ್ಕಳನ್ನು ಸುರಕ್ಷತಾ ನಿಯಮಗಳನ್ನು ಪಾಲಿಸದೇ ತೆರದ ಟಿಪ್ಪರ್‌ನಲ್ಲಿ ತುಂಬಿಸಿಕೊಂಡು ಕರೆದೊಯ್ಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಟಿಪ್ಪರ್ ಅಪಘಾತಗೊಂಡರೆ ಅಥವಾ ಅಕಸ್ಮಾತ್ ಬ್ರೇಕ್ ಹಾಕಿದರೆ ದೊಡ್ಡ ಅನಾಹುತ ಸಂಭವಿಸಬಹುದೆಂಬ ಆತಂಕ ವ್ಯಕ್ತವಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಮಕ್ಕಳ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…

ಸೆ. 10 ಮತ್ತು 11ರಂದು ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ‘ಆರೋಹಂ’ ಶೈಕ್ಷಣಿಕ–ಸಾಂಸ್ಕೃತಿಕ ಉತ್ಸವ

ಉಜಿರೆ: ಸ್ಥಳೀಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11ರಂದು ರಾಷ್ಟ್ರಮಟ್ಟದ…