tamanvi
ಶಿಕ್ಷಣ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಉದ್ಯಮಶೀಲತೆ ಮತ್ತು ನಾವೀನ್ಯತೆ ಕುರಿತ ಕಾರ್ಯಾಗಾರ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ಇದರ ಮಾನವಿಕ ವಿಜ್ಞಾನ ವಿಭಾಗವು ಇನೊವೇಶನ್ ಹಬ್, ಸೆಂಟರ್ ಫಾರ್ ಇನೊವೇಶನ್ ಅಂಡ್ ಎಂಟ್ರಪ್ರಿನ್ಯರ‍್ಶಿಪ್ ಹಾಗೂ ನ್ಯೂ ಏಜ್ ಇಂಕ್ಯುಬೇಶನ್ ನೆಟ್ವರ್ಕ್ ಸಹಯೋಗದಲ್ಲಿ “ಉದ್ಯಮಶೀಲತೆ ಮತ್ತು ನಾವೀನ್ಯತೆ: ವೃತ್ತಿಪಥವಾಗಿ ಸಾಮಾಜಿಕ ಉದ್ಯಮಶೀಲತೆ” ವಿಷಯದ ಕುರಿತ ಕಾರ್ಯಾಗಾರವನ್ನು ಪಿಜಿ ಸೆಮಿನಾರ್ ಹಾಲಿನಲ್ಲಿ ಆಯೋಜಿಸಲಾಯಿತು.

maithri

philo

ಕಾರ‍್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಗೋಲೆಕ್ಸ್ ಇಂಡಸ್ಟ್ರೀಸ್, ಪುತ್ತೂರು ಸಂಸ್ಥೆಯ ಮಾಲೀಕ ಶ್ರೀಕೃಷ್ಣ ಮೋಹನ್ ಪಿ.ಎಸ್. ಅವರು, ವಿದ್ಯಾರ್ಥಿಗಳು ಉದ್ಯೋಗ ಅರಸುವವರಾಗದೆ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ ಪ್ರಾಂಶುಪಾಲ ಡಾ. ವಿಜಯ ಕುಮಾರ್ ಎಂ. ಅವರು, ವಿದ್ಯಾರ್ಥಿಗಳಲ್ಲಿ ಉದ್ಯಮಶೀಲ ಮನೋಭಾವ ಬೆಳೆಸುವುದು ಅತ್ಯವಶ್ಯಕ ಎಂದರು.

ಕಾರ‍್ಯಕ್ರಮದಲ್ಲಿ ಮಾನವಿಕ ವಿಜ್ಞಾನ ವಿಭಾಗದ ಉಪನ್ಯಾಸಕರು ಹಾಜರಿದ್ದರು. ದ್ವಿತೀಯ ಬಿ.ಎ. ವಿದ್ಯಾರ್ಥಿನಿ ವೈಷ್ಣವಿ ಮತ್ತು ತಂಡ ಪ್ರಾರ್ಥಿಸಿದರು. ಮಾನವಿಕ ವಿಜ್ಞಾನ ವಿಭಾಗದ ಡೀನ್ ಡಾ. ನಾರ್ಬರ್ಟ್ ಮಸ್ಕರೇನ್ಹಾಸ್ ಸ್ವಾಗತಿಸಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಕಾರ‍್ಯಕ್ರಮ ಸಂಚಾಲಕರಾದ ಕ್ಯಾಪ್ಟನ್ ಜಾನ್ಸನ್ ಡೇವಿಡ್ ಸಿಕ್ವೇರಾ ವಂದಿಸಿದರು. ಪ್ರಥಮ ಬಿ.ಎ. ವಿದ್ಯಾರ್ಥಿನಿ ಸೃಷ್ಟಿ ಶೆಣೈ ಕಾರ‍್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…