ಶಿಕ್ಷಣ

10 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ. – ಯು.ಕೆ.ಜಿ. ಆರಂಭಕ್ಕೆ ಸಜ್ಜು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಮಹತ್ವದ ಯೋಜನೆ ಕೈಗೊಳ್ಳಲು ಮುಂದಾಗಿದೆ. ಮುಂಬರುವ 2026ರ ಬಜೆಟ್ನಲ್ಲಿ ರಾಜ್ಯದ ಸುಮಾರು 10 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸುವ ಸಾಧ್ಯತೆ ಇದೆ.

ಖಾಸಗಿ ಶಾಲೆಗಳತ್ತ ಹೆಜ್ಜೆಯಿಡುತ್ತಿರುವ ಪೋಷಕರನ್ನು ಮತ್ತೆ ಸರ್ಕಾರಿ ಶಾಲೆಗಳತ್ತ ಸೆಳೆಯಲು ಪೂರ್ವ ಪ್ರಾಥಮಿಕ ಶಿಕ್ಷಣವೇ ಪ್ರಮುಖ ಆಕರ್ಷಣೆಯಾಗಲಿದೆ ಎಂದು ಶಿಕ್ಷಣ ಇಲಾಖೆ ವಲಯಗಳು ತಿಳಿಸಿವೆ. ಈಗಾಗಲೇ 2018-19ರಿಂದ 2024-25ರವರೆಗೆ 2,619 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. 2025-26ರ ಬಜೆಟ್ನಲ್ಲಿ ಘೋಷಿಸಿದಂತೆ 5 ಸಾವಿರ ಶಾಲೆಗಳ ಪೈಕಿ 4,056 ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಮಹತ್ವದ ಯೋಜನೆ ಕೈಗೊಳ್ಳಲು ಮುಂದಾಗಿದೆ. ಮುಂಬರುವ 2026ರ ಬಜೆಟ್ನಲ್ಲಿ ರಾಜ್ಯದ ಸುಮಾರು 10 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸುವ ಸಾಧ್ಯತೆ ಇದೆ.

ಖಾಸಗಿ ಶಾಲೆಗಳತ್ತ ಹೆಜ್ಜೆಯಿಡುತ್ತಿರುವ ಪೋಷಕರನ್ನು ಮತ್ತೆ ಸರ್ಕಾರಿ ಶಾಲೆಗಳತ್ತ ಸೆಳೆಯಲು ಪೂರ್ವ ಪ್ರಾಥಮಿಕ ಶಿಕ್ಷಣವೇ ಪ್ರಮುಖ ಆಕರ್ಷಣೆಯಾಗಲಿದೆ ಎಂದು ಶಿಕ್ಷಣ ಇಲಾಖೆ ವಲಯಗಳು ತಿಳಿಸಿವೆ. ಈಗಾಗಲೇ 2018-19ರಿಂದ 2024-25ರವರೆಗೆ 2,619 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. 2025-26ರ ಬಜೆಟ್ನಲ್ಲಿ ಘೋಷಿಸಿದಂತೆ 5 ಸಾವಿರ ಶಾಲೆಗಳ ಪೈಕಿ 4,056 ಶಾಲೆಗಳಲ್ಲಿ ತರಗತಿಗಳು ಆರಂಭವಾಗಿವೆ.
‘ಸಮಗ್ರ ಶಿಕ್ಷಣ ಕರ್ನಾಟಕ’ ಯೋಜನೆಯಡಿ ಮಕ್ಕಳಿಗೆ ಬಿಸಿಯೂಟ, ಹಾಲು ಹಾಗೂ ವಾರಕ್ಕೆ ಎರಡು ದಿನ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುತ್ತಿದ್ದು, ಪೌಷ್ಟಿಕ ಆಹಾರದ ಜೊತೆಗೆ ಉಚಿತ ಪೂರ್ವ ಪ್ರಾಥಮಿಕ ಶಿಕ್ಷಣವೂ ಲಭ್ಯವಾಗುತ್ತಿದೆ. ಇದರಿಂದ ಪೋಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಪ್ರಸ್ತುತ ರಾಜ್ಯದಲ್ಲಿ ಒಟ್ಟು 41,279 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಹಂತ ಹಂತವಾಗಿ ಎಲ್ಲ ಶಾಲೆಗಳಿಗೂ ಎಲ್ಕೆಜಿ-ಯುಕೆಜಿ ವಿಸ್ತರಣೆ ಮಾಡುವ ಉದ್ದೇಶ ಸರ್ಕಾರದ್ದಾಗಿದೆ. ಆದರೆ, ಇದಕ್ಕಾಗಿ ಅಗತ್ಯವಾದ ಮೂಲಸೌಕರ್ಯ, ತರಗತಿ ಕೊಠಡಿಗಳು, ಆಟಿಕೆಗಳು ಹಾಗೂ ಶಿಕ್ಷಕರಿಗೆ ವಿಶೇಷ ತರಬೇತಿ ನೀಡುವುದು ಸರ್ಕಾರದ ಮುಂದಿರುವ ಪ್ರಮುಖ ಸವಾಲಾಗಿದೆ.
ಯೋಜನೆ ಸಮರ್ಪಕವಾಗಿ ಜಾರಿಗೆ ಬಂದರೆ, ಬಡ ಹಾಗೂ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವ ಜೊತೆಗೆ ಸರ್ಕಾರಿ ಶಾಲೆಗಳಿಗೆ ಮರುಜೀವ ಸಿಗಲಿದೆ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ತರಗತಿಗಳು ಆರಂಭವಾಗಿವೆ.
‘ಸಮಗ್ರ ಶಿಕ್ಷಣ ಕರ್ನಾಟಕ’ ಯೋಜನೆಯಡಿ ಮಕ್ಕಳಿಗೆ ಬಿಸಿಯೂಟ, ಹಾಲು ಹಾಗೂ ವಾರಕ್ಕೆ ಎರಡು ದಿನ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುತ್ತಿದ್ದು, ಪೌಷ್ಟಿಕ ಆಹಾರದ ಜೊತೆಗೆ ಉಚಿತ ಪೂರ್ವ ಪ್ರಾಥಮಿಕ ಶಿಕ್ಷಣವೂ ಲಭ್ಯವಾಗುತ್ತಿದೆ. ಇದರಿಂದ ಪೋಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಪ್ರಸ್ತುತ ರಾಜ್ಯದಲ್ಲಿ ಒಟ್ಟು 41,279 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಹಂತ ಹಂತವಾಗಿ ಎಲ್ಲ ಶಾಲೆಗಳಿಗೂ ಎಲ್ಕೆಜಿ-ಯುಕೆಜಿ ವಿಸ್ತರಣೆ ಮಾಡುವ ಉದ್ದೇಶ ಸರ್ಕಾರದ್ದಾಗಿದೆ. ಆದರೆ, ಇದಕ್ಕಾಗಿ ಅಗತ್ಯವಾದ ಮೂಲಸೌಕರ್ಯ, ತರಗತಿ ಕೊಠಡಿಗಳು, ಆಟಿಕೆಗಳು ಹಾಗೂ ಶಿಕ್ಷಕರಿಗೆ ವಿಶೇಷ ತರಬೇತಿ ನೀಡುವುದು ಸರ್ಕಾರದ ಮುಂದಿರುವ ಪ್ರಮುಖ ಸವಾಲಾಗಿದೆ.
ಯೋಜನೆ ಸಮರ್ಪಕವಾಗಿ ಜಾರಿಗೆ ಬಂದರೆ, ಬಡ ಹಾಗೂ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವ ಜೊತೆಗೆ ಸರ್ಕಾರಿ ಶಾಲೆಗಳಿಗೆ ಮರುಜೀವ ಸಿಗಲಿದೆ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿಶೇಷ ಯೋಜನೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು…

ಕೈಕಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ: ಎರಡು ದಿನಗಳ ಐತಿಹಾಸಿಕ ಸಂಭ್ರಮಕ್ಕೆ ಭರ್ಜರಿ ಸಿದ್ಧತೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಕೈಕಾರ ಸರ್ಕಾರಿ ಹಿರಿಯ…