ಶಿಕ್ಷಣ

ಸಿಬಿಎಸ್ಇ 10ನೇ ತರಗತಿ: ಮೊದಲ ಬೋರ್ಡ್ ಪರೀಕ್ಷೆಗೆ ಕಡ್ಡಾಯ ಹಾಜರಾತಿ! ಗೈರುಹಾಜರಾದರೆ ‘ಎಸೆನ್ಷಿಯಲ್ ರಿಪೀಟ್’

GL

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ:ಸಿಬಿಎಸ್ಇ 10ನೇ ತರಗತಿ ವಿದ್ಯಾರ್ಥಿಗಳಿಗೆ 2026ನೇ ಸಾಲಿನಿಂದ ಜಾರಿಯಾಗುತ್ತಿರುವ ಎರಡು ಬೋರ್ಡ್ ಪರೀಕ್ಷಾ ಪದ್ಧತಿಯಡಿ ಮಹತ್ವದ ಸೂಚನೆ ನೀಡಲಾಗಿದೆ. ಮೊದಲ ಬೋರ್ಡ್ ಪರೀಕ್ಷೆಗೆ ಹಾಜರಾಗುವುದು ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿದ್ದು, ಮೂರು ಅಥವಾ ಅದಕ್ಕಿಂತ ಹೆಚ್ಚು ವಿಷಯಗಳಿಗೆ ಗೈರುಹಾಜರಾದರೆ ‘ಎಸೆನ್ಷಿಯಲ್ ರಿಪೀಟ್’ ವಿಭಾಗಕ್ಕೆ ಸೇರಿಸಲಾಗುತ್ತದೆ ಎಂದು ಮಂಡಳಿ ಸ್ಪಷ್ಟಪಡಿಸಿದೆ.

chennai-shopping
maithri

ಪರೀಕ್ಷಾ ನಿಯಂತ್ರಣಾಧಿಕಾರಿ ಸಂಯಮ್ ಭಾರದ್ವಾಜ್ ಅವರ ಪ್ರಕಾರ, ಮೊದಲ ಪರೀಕ್ಷೆಯಲ್ಲಿ ಮೂರು ವಿಷಯಗಳಿಗೆ ಗೈರುಹಾಜರಾದರೆ ಮೇ ತಿಂಗಳಲ್ಲಿ ನಡೆಯುವ ಎರಡನೇ ಪರೀಕ್ಷೆಗೆ ಅವಕಾಶ ಇರುವುದಿಲ್ಲ. ಅಂತಹ ವಿದ್ಯಾರ್ಥಿಗಳು ಮುಂದಿನ ವರ್ಷ ನಡೆಯುವ ಮುಖ್ಯ ಪರೀಕ್ಷೆಗೆ ಮಾತ್ರ ಹಾಜರಾಗಬೇಕಾಗುತ್ತದೆ.ಮೊದಲ ಪರೀಕ್ಷೆ ಮುಖ್ಯವಾಗಿದ್ದು, ಎರಡನೇ ಪರೀಕ್ಷೆ ಅಂಕ ಸುಧಾರಣೆ (Improvement) ಅಥವಾ ಕಂಪಾರ್ಟ್ಮೆಂಟ್ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಒಂದು ವಿಷಯ ಮಾತ್ರ ಗಂಭೀರ ಕಾರಣದಿಂದ ತಪ್ಪಿಸಿಕೊಂಡರೆ, 15 ದಿನಗಳೊಳಗೆ ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸಿದರೆ ವಿಶೇಷ ಪರಿಗಣನೆ ನೀಡಬಹುದು.

ಪರೀಕ್ಷಾ ದಿನ ವಿದ್ಯಾರ್ಥಿಗಳು ಬೆಳಿಗ್ಗೆ 10 ಗಂಟೆಯೊಳಗೆ ಕೇಂದ್ರದಲ್ಲಿ ಹಾಜರಾಗಬೇಕು. ಪ್ರವೇಶ ಪತ್ರ, ಶಾಲಾ ಗುರುತಿನ ಚೀಟಿ ಕಡ್ಡಾಯವಾಗಿದ್ದು, ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳನ್ನು ತರಲು ಅವಕಾಶ ಇರುವುದಿಲ್ಲ ಎಂದು ಮಂಡಳಿ ಎಚ್ಚರಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವಿವೇಕಾನಂದ ಕಾಲೇಜಿನಲ್ಲಿ ಹಂಸಧ್ವನಿ ಕಾರ್ಯಕ್ರಮ | ಸಂಗೀತ ಭಾರತೀಯ ಸಂಸ್ಕೃತಿಯ ಸಂಪತ್ತು: ವಿದ್ವಾನ್ ಕಾಂಚನ ಎ. ಈಶ್ವರ ಭಟ್

ಪುತ್ತೂರು: ಸಂಗೀತವೆಂದರೆ ಒಂದು ಕುಟುಂಬವಿದ್ದಂತೆ.  ಸಂಗೀತ ಹೇಳುವುದು ಹಾಗೂ ಕೇಳುವುದರಲ್ಲಿ…

ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ…