ಶಿಕ್ಷಣ

2026-27ರಿಂದ ಎಐ ಇ-ಹಾಜರಾತಿ ಕಡ್ಡಾಯ: ಸರ್ಕಾರಿ ಶಾಲೆ-ಪಿಯು ಕಾಲೇಜುಗಳಿಗೆ ಹೊಸ ಆದೇಶ

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಎಐ ಆಧಾರಿತ ಇ-ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

chennai-shopping
maithri

ವಿದ್ಯಾರ್ಥಿಗಳಿಗೆ ‘ನಿರಂತರ’ ಫೇಸ್ ರೆಕಗ್ನಿಷನ್:

ವಿದ್ಯಾರ್ಥಿಗಳ ಹಾಜರಾತಿಗಾಗಿ ಎಐ ಆಧಾರಿತ ಮುಖ ಗುರುತಿಸುವಿಕೆ ವ್ಯವಸ್ಥೆಯನ್ನು ‘ನಿರಂತರ’ ಯೋಜನೆಯಡಿ ಜಾರಿಗೆ ತರಲಾಗುತ್ತಿದೆ. ರಾಜ್ಯದ 52,686 ಶಾಲೆಗಳಲ್ಲಿ ಈ ವ್ಯವಸ್ಥೆ ಅಳವಡಿಸಲಾಗುತ್ತದೆ. ಆರಂಭಿಕವಾಗಿ 5 ಕೋಟಿ ರೂ. ಮೀಸಲಿಡಲಾಗಿದ್ದರೂ, ಇದೀಗ 2.16 ಕೋಟಿ ರೂ. ವೆಚ್ಚದಲ್ಲಿ 2026-27ರಿಂದ ಕಡ್ಡಾಯ ಜಾರಿ ಮಾಡಲಾಗುತ್ತಿದೆ.

ಶಿಕ್ಷಕರಿಗೆ KAMS ಆಪ್ ಕಡ್ಡಾಯ

ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಬಯೋಮೆಟ್ರಿಕ್ ಯಂತ್ರಗಳ ಬದಲಿಗೆ ಮೊಬೈಲ್ ಆಧಾರಿತ ‘ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ’ (KAMS) ಆಪ್ ಮೂಲಕವೇ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಲಿದೆ.
ಈ ನಿಯಮ ಪರೀಕ್ಷಾ ಕರ್ತವ್ಯ ಮತ್ತು ಮೌಲ್ಯಮಾಪನ ಕೇಂದ್ರಗಳಿಗೂ ಅನ್ವಯವಾಗಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವಿವೇಕಾನಂದ ಕಾಲೇಜಿನಲ್ಲಿ ಹಂಸಧ್ವನಿ ಕಾರ್ಯಕ್ರಮ | ಸಂಗೀತ ಭಾರತೀಯ ಸಂಸ್ಕೃತಿಯ ಸಂಪತ್ತು: ವಿದ್ವಾನ್ ಕಾಂಚನ ಎ. ಈಶ್ವರ ಭಟ್

ಪುತ್ತೂರು: ಸಂಗೀತವೆಂದರೆ ಒಂದು ಕುಟುಂಬವಿದ್ದಂತೆ.  ಸಂಗೀತ ಹೇಳುವುದು ಹಾಗೂ ಕೇಳುವುದರಲ್ಲಿ…

ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ…