ಶಿಕ್ಷಣ

ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ವ್ಯತ್ಯಯ ಬೇಡ: ಇಂಧನ ಸಚಿವರಿಗೆ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು:ಪರೀಕ್ಷಾ ಅವಧಿಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ  ವಿದ್ಯುತ್ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಶಾಸಕ  ಯಶ್ಪಾಲ್ ಸುವರ್ಣ ಅವರು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

gl

ಮುಂಬರುವ ಎಸ್‌ಎಸ್‌ಎಲ್‌ಸಿ, ಪಿಯುಸಿ ಸೇರಿದಂತೆ ವಿವಿಧ ವಾರ್ಷಿಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಓದಿಗೆ ಯಾವುದೇ ಅಡಚಣೆ ಉಂಟಾಗಬಾರದು. ಆದ್ದರಿಂದ ಪರೀಕ್ಷಾ ದಿನಗಳಲ್ಲಿ ಲೋಡ್ ಶೆಡ್ಡಿಂಗ್ ಮಾಡದೇ ನಿರಂತರ ವಿದ್ಯುತ್ ಪೂರೈಕೆ ಒದಗಿಸಬೇಕು ಎಂದು ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಹೊಂದಿದ್ದು, ಪ್ರತೀ ವರ್ಷ ಉತ್ತಮ ಶೈಕ್ಷಣಿಕ ಫಲಿತಾಂಶ ದಾಖಲಿಸುತ್ತಿದೆ. ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದರಿಂದ, ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ಪೂರೈಕೆ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಗಳು, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ನಡೆಯಲಿದ್ದು, ಈ ಅವಧಿಯಲ್ಲಿ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಸಿದ್ಧತೆ ನಡೆಸಲು ಅನುಕೂಲಕರ ವಾತಾವರಣ ನಿರ್ಮಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ.ಜಿಲ್ಲಾಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿ ಜಿಲ್ಲೆಯಾದ್ಯಂತ ನಿರಂತರ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಬೇಕು ಎಂದು ಸುವರ್ಣ ಮನವಿ ಮಾಡಿದ್ದಾರೆ.

 


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…