ಶಿಕ್ಷಣ

ವಿದ್ಯಾರ್ಥಿಗಳ ಮೊಬೈಲ್ ಅಡಿಕ್ಷನ್’ಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ‘ಫೋನ್ ಬಿಡಿ, ಪುಸ್ತಕ ಹಿಡಿ’ ಅಭಿಯಾನ ಆರಂಭ

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಫೋನ್ ಬಳಕೆ ನಿಯಂತ್ರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಫೋನ್ ಬಿಡಿ, ಪುಸ್ತಕ ಹಿಡಿ’ ಅಭಿಯಾನ ಆರಂಭಿಸಲಾಗಿದೆ.ಶಾಲಾ ಅವಧಿಯಲ್ಲಿ ಫೋನ್‌ನಿಂದ ದೂರವಿರುವ ಮಕ್ಕಳು ಮನೆಗೆ ಹೋದ ಬಳಿಕ ಮೊಬೈಲ್‌ಗೆ ಹೆಚ್ಚು ಅಂಟಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಓದಿನ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದ್ದು,ಈ ಉದ್ಧೇಶದಿಂದ ಈ ಹೊಸ ಅಭಿಯಾನ ಕೈಗೆತ್ತಿಕೊಳ್ಳಲಾಗಿದೆ.

ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವುದರ ಜೊತೆಗೆ, ಮೊಬೈಲ್ ಬಳಕೆ ಕಡಿಮೆ ಮಾಡುವ ಸಲುವಾಗಿ ವಿವಿಧ ಆಟ-ಪಾಠ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸುವ ಪ್ರಯತ್ನ ಇದಾಗಿದೆ

ಮಕ್ಕಳಲ್ಲಿ ಓದುವ ಹವ್ಯಾಸ ಹೆಚ್ಚಿಸಲು ರಾಜ್ಯ ಸರ್ಕಾರದ ಮಹತ್ವದ ಕ್ರಮ

chennai-shopping
maithri

ಶಾಲೆಯಲ್ಲಿ ಇದ್ದಷ್ಟು ಸಮಯ ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿರುವುದಾದರೂ, ಮನೆಗೆ ಹೋದ ಬಳಿಕ ಫೋನ್‌ನ ಅತಿಯಾದ ಬಳಕೆಗೆ ಒಳಗಾಗುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಓದಿನ ಬಗ್ಗೆ ಆಸಕ್ತಿ ಮೂಡಿಸುವುದರ ಜೊತೆಗೆ, ಅವರ ಗಮನವನ್ನು ಪುಸ್ತಕಗಳತ್ತ ಸೆಳೆಯಲು ಈ ಹೊಸ ಕ್ರಮ ಕೈಗೆತ್ತಿಕೊಳ್ಳಲಾಗಿದೆ.
ಈ ಅಭಿಯಾನದ ಭಾಗವಾಗಿ ಶಾಲಾ ಮಟ್ಟದಲ್ಲಿ ಓದು ಚಟುವಟಿಕೆಗಳು, ಪುಸ್ತಕ ಓದುವ ಸ್ಪರ್ಧೆಗಳು, ಗುಂಪು ಚರ್ಚೆಗಳು, ಸೃಜನಾತ್ಮಕ ಆಟಗಳು ಹಾಗೂ ಪಾಠ್ಯೇತರ ಚಟುವಟಿಕೆಗಳನ್ನು ಆಯೋಜಿಸಲು ಸೂಚನೆ ನೀಡಲಾಗಿದೆ. ಇದರಿಂದ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆದು, ಮೊಬೈಲ್ ಬಳಕೆಯ ಅವಲಂಬನೆ ಕಡಿಮೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಮಕ್ಕಳು ಯಾವ ಕಾರಣಗಳಿಂದ ಮೊಬೈಲ್ ಬಳಕೆಗೆ ಹೆಚ್ಚು ಒಲವು ತೋರುತ್ತಿದ್ದಾರೆ ಎಂಬುದನ್ನು ಗುರುತಿಸಿ, ಅವರನ್ನು ಡಿಜಿಟಲ್ ವ್ಯಸನದಿಂದ ದೂರವಿರಿಸಲು ಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುತ್ತದೆ.ಈ ಅಭಿಯಾನ ಮಕ್ಕಳ ಸಮಗ್ರ ಬೆಳವಣಿಗೆಗೆ ಪೂರಕವಾಗುವುದರ ಜೊತೆಗೆ, ಅವರಲ್ಲಿ ಉತ್ತಮ ಓದುವ ಸಂಸ್ಕೃತಿಯನ್ನು ಬೆಳೆಸಲು ಸಹಕಾರಿ ಆಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವಿವೇಕಾನಂದ ಕಾಲೇಜಿನಲ್ಲಿ ಹಂಸಧ್ವನಿ ಕಾರ್ಯಕ್ರಮ | ಸಂಗೀತ ಭಾರತೀಯ ಸಂಸ್ಕೃತಿಯ ಸಂಪತ್ತು: ವಿದ್ವಾನ್ ಕಾಂಚನ ಎ. ಈಶ್ವರ ಭಟ್

ಪುತ್ತೂರು: ಸಂಗೀತವೆಂದರೆ ಒಂದು ಕುಟುಂಬವಿದ್ದಂತೆ.  ಸಂಗೀತ ಹೇಳುವುದು ಹಾಗೂ ಕೇಳುವುದರಲ್ಲಿ…

ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ…