ಶಿಕ್ಷಣ

ನನ್ನ ಭಾರತಕ್ಕಾಗಿ ಯುವ ಜನತೆ, ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ – ಅಕ್ಷಯ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ಶಿಬಿರ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಅಕ್ಷಯ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ನೇತೃತ್ವದಲ್ಲಿ ‘ನನ್ನ ಭಾರತಕ್ಕಾಗಿ ಯುವ ಜನತೆ, ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ’ ವಾರ್ಷಿಕ ವಿಶೇಷ ಶಿಬಿರ 2025-26 ಪೆರ್ನೆ ಅಯೋಧ್ಯಾ ನಗರದ ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರಾರಂಭಗೊಂಡಿತು.

chennai-shopping
maithri

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ರಾಮಚಂದ್ರ ವಿದ್ಯಾಲಯದ ಸಂಚಾಲಕ, ಉಚ್ಚನ್ಯಾಯಾಲಯದ ವಕೀಲ ಹರೀಶ್ ಭಂಡಾರಿ ಟಿ., ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮ ವಿದ್ಯಾರ್ಥಿ ಜೀವನದ ಅನುಭವವನ್ನು ವಿದ್ಯಾರ್ಥಿಗಳ ಮುಂದೆ ತೆರೆದಿಟ್ಟರು.

ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಇಂದು ಉನ್ನತ ಮಟ್ಟದಲ್ಲಿ ಗುರುತಿಸಿಕೊಂಡಿರುವುದನ್ನು ನಾವು ಕಾಣುತ್ತೇವೆ. ವಿದ್ಯಾರ್ಥಿಗಳು ಎನ್.ಎಸ್.ಎಸ್.ನಲ್ಲಿ ತೊಡಗಿಸಿಕೊಳ್ಳಲು ಇದೇ ಪ್ರೇರಣೆ ಎಂದರು.

ಅಕ್ಷಯ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಮಾತನಾಡಿ, ತಮ್ಮ ಕಾಲೇಜಿನ ರಾಷ್ಟೀಯ ಸೇವಾ ಯೋಜನೆಯು 14 ವಿದ್ಯಾರ್ಥಿಗಳಿಂದ ಪ್ರಾರಂಭಗೊಂಡು ಇದೀಗ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡಿದೆ. ಈ ವರ್ಷದ ವಾರ್ಷಿಕ ವಿಶೇಷ ಶಿಬಿರದಲ್ಲಿ ಸುಮಾರು ಎಪ್ಪತ್ತೈದಕ್ಕಿಂತ ಹೆಚ್ಚು ವಿದ್ಯಾರ್ಥಿಗಳ ಭಾಗವಹಿಸುವಿಕೆ ತುಂಬಾ ಹೆಮ್ಮೆಯ ವಿಷಯ ಎಂದರು.

ಕಾಲೇಜಿನ ಪ್ರಾಂಶುಪಾಲ ಶೇಖರ್ ರೈ ಕೆ., ಶ್ರೀ ರಾಮಚಂದ್ರ ಪ್ರೌಢಶಾಲಾ ಮುಖ್ಯಗುರು ಸತ್ಯನಾರಾಯಣ ರೈ ಕೆ.ಎಂ. ಶುಭಹಾರೈಸಿದರು.

ಅಕ್ಷಯ ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ಜಯಂತ, ಆಡಳಿತ ಅಧಿಕಾರಿ ಅರ್ಪಿತ್ ಟಿ.ಎ. ಉಪಸ್ಥಿತರಿದ್ದರು.

ಶಿಬಿರಾಧಿಕಾರಿ ಮೇಘಶ್ರೀ ಸ್ವಾಗತಿಸಿ, ಶಿಬಿರಾಧಿಕಾರಿ ರಾಕೇಶ್ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಘಟಕ 1ರ ನಾಯಕ ಸುಹಾಸ್ ವಂದಿಸಿ, ಸ್ವಯಂಸೇವಕಿ ವಿಂಧುಶ್ರೀ ಕಾರ್ಯಕ್ರಮ ನಿರೂಪಿಸಿದರು.

ನಂತರ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವಿವೇಕಾನಂದ ಕಾಲೇಜಿನಲ್ಲಿ ಹಂಸಧ್ವನಿ ಕಾರ್ಯಕ್ರಮ | ಸಂಗೀತ ಭಾರತೀಯ ಸಂಸ್ಕೃತಿಯ ಸಂಪತ್ತು: ವಿದ್ವಾನ್ ಕಾಂಚನ ಎ. ಈಶ್ವರ ಭಟ್

ಪುತ್ತೂರು: ಸಂಗೀತವೆಂದರೆ ಒಂದು ಕುಟುಂಬವಿದ್ದಂತೆ.  ಸಂಗೀತ ಹೇಳುವುದು ಹಾಗೂ ಕೇಳುವುದರಲ್ಲಿ…

ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ…