ಶಿಕ್ಷಣ

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ? ಸರ್ಕಾರದ ಗಂಭೀರ ಚಿಂತನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು:ರಾಜ್ಯದಲ್ಲಿ 16 ವರ್ಷದೊಳಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಇದೀಗ ಶಾಲಾ ಶಿಕ್ಷಣ ಸಚಿವ ಮದು ಬಂಗಾರಪ್ಪ ಮಹತ್ವದ ಮಾಹಿತಿ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, 16 ವರ್ಷದೊಳಗಿನ ವಿದ್ಯಾರ್ಥಿಗಳ ಮೊಬೈಲ್ ಬಳಕೆಯ ನಿಯಂತ್ರಣ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಮೊದಲು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ತಜ್ಞರು ಹಾಗೂ ಮನೋವೈದ್ಯರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.

‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಆಂದೋಲನಕ್ಕೆ ರೂಪರೇಖೆ

ಮಕ್ಕಳಿಗೆ ಮೊಬೈಲ್ ಒದಗಿಸುವವರು ಪೋಷಕರೇ. ಆದರೆ ಅತಿಯಾದ ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣಗಳಿಂದ ಮಕ್ಕಳು ದಾರಿ ತಪ್ಪುತ್ತಿರುವುದು ದೇಶವ್ಯಾಪಿ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಎಂಬ ಆಂದೋಲನ ರೂಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಮತೋಲನದ ಕ್ರಮಕ್ಕೆ ಸರ್ಕಾರದ ಒತ್ತು

ಮೊಬೈಲ್ ಬಳಕೆಯನ್ನು ಕೇವಲ ತರಗತಿ ಕೊಠಡಿಗಳ ಮಟ್ಟಿಗೆ ಮಾತ್ರ ಸೀಮಿತಗೊಳಿಸುವುದಲ್ಲ, ಜವಾಬ್ದಾರಿಯುತ ಹಾಗೂ ಸಮಗ್ರ ಕ್ರಮ ಜಾರಿಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಸಂಪೂರ್ಣ ನಿಷೇಧಕ್ಕಿಂತಲೂ ಸಮತೋಲನ ಸಾಧಿಸುವತ್ತ ಸರ್ಕಾರದ ಗಮನವಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಶಿಕ್ಷಣಕ್ಕೆ ಅಗತ್ಯವಿರುವ ಡಿಜಿಟಲ್ ಉಪಕರಣಗಳ ಬಳಕೆಯನ್ನು ಉತ್ತೇಜಿಸುತ್ತಾ, ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಯಂತ್ರಿಸಲು ಮಾರ್ಗಸೂಚಿಗಳನ್ನು ರೂಪಿಸುವ ಸಾಧ್ಯತೆ ಇದೆ. ಈ ಕುರಿತು ಅಂತಿಮ ತೀರ್ಮಾನ ಶೀಘ್ರದಲ್ಲೇ ಪ್ರಕಟವಾಗುವ ನಿರೀಕ್ಷೆಯಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಸೈಂಟ್ ಪಿಲೋಮಿನಾ ಕಾಲೇಜಿನಲ್ಲಿ ‘ಮಾಸ್ಟರ್ ಮಿಕ್ಸ್ ಶೆಫ್ಟ್’ ಅಗ್ನಿಯಿಲ್ಲದೆ ಅಡುಗೆ ಸ್ಪರ್ಧೆ

ಪುತ್ತೂರು:ಇಲ್ಲಿನ ಸೈಂಟ್ ಪಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ…

ಅಂಬಿಕಾದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿಶೇಷ ಯೋಜನೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು…

ಕೈಕಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ: ಎರಡು ದಿನಗಳ ಐತಿಹಾಸಿಕ ಸಂಭ್ರಮಕ್ಕೆ ಭರ್ಜರಿ ಸಿದ್ಧತೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಕೈಕಾರ ಸರ್ಕಾರಿ ಹಿರಿಯ…