ಶಿಕ್ಷಣ

ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026–27ನೇ ಸಾಲಿನ ಬಜೆಟ್‌ನಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಯಂತ್ರಿಸುವ ಯೋಜನೆಯನ್ನು ಪ್ರಕಟಿಸಿದರು.

Shani-pooja

ಇತ್ತೀಚಿನ ವರ್ಷಗಳಲ್ಲಿ ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯಿಂದ ಮಕ್ಕಳ ಮನೋವೈಜ್ಞಾನಿಕ ಹಾಗೂ ಶಾರೀರಿಕ ಆರೋಗ್ಯದ ಮೇಲೆ ಉಂಟಾಗುತ್ತಿರುವ ಪರಿಣಾಮಗಳನ್ನು ಗಮನಿಸಿ ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಶಾಲೆಗಳು ಮತ್ತು ಕಾಲೇಜುಗಳನ್ನು ವಿದ್ಯಾರ್ಥಿಗಳ ಶಿಕ್ಷಣ ಹಾಗೂ ವ್ಯಕ್ತಿತ್ವ ನಿರ್ಮಾಣದ ಕೇಂದ್ರಗಳಾಗಿ ರೂಪಿಸುವ ಉದ್ದೇಶದಿಂದ ಶಿಕ್ಷಣ ಸಂಸ್ಥೆಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿಶೇಷ ಕಾರ್ಯಕ್ರಮಗಳನ್ನು ಕೂಡ ಜಾರಿಗೆ ತರಲಾಗುತ್ತದೆ. ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳು, ಕಠಿಣ ನಿಯಮಗಳು ಮತ್ತು ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಯೋಜನೆ ಸರ್ಕಾರದದ್ದಾಗಿದೆ.

ಇದರ ಜೊತೆಗೆ, 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣದ ಪುಸ್ತಕಗಳನ್ನು ಉಚಿತವಾಗಿ ನೀಡುವ ಯೋಜನೆಯೂ ಘೋಷಿಸಲಾಗಿದೆ. ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ಒದಗಿಸುವುದಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಮೀಸಲಿಡಲಾಗಿದೆ. ಹೊಸ ತರಗತಿ ಕೊಠಡಿಗಳ ನಿರ್ಮಾಣ ಹಾಗೂ ಹಳೆಯ ಕೊಠಡಿಗಳ ದುರಸ್ತಿ ಕಾರ್ಯಗಳಿಗೆ ₹565 ಕೋಟಿ, ಶಾಲಾ ಶೌಚಾಲಯಗಳ ನಿರ್ಮಾಣಕ್ಕೆ ₹75 ಕೋಟಿ ಮತ್ತು ಪೀಠೋಪಕರಣಗಳ ಖರೀದಿಗೆ ₹25 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಇದೇ ವೇಳೆ ಶಿಕ್ಷಣ ಕ್ಷೇತ್ರದಲ್ಲಿ ಖಾಲಿ ಇರುವ ಸುಮಾರು 15 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸರ್ಕಾರ ಘೋಷಿಸಿದೆ. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ 204 ಬಿಆರ್‌ಸಿ ಕೇಂದ್ರಗಳಲ್ಲಿ ತಜ್ಞ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸುವ ಯೋಜನೆಯೂ ಜಾರಿಗೆ ಬರಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಸೈಂಟ್ ಪಿಲೋಮಿನಾ ಕಾಲೇಜಿನಲ್ಲಿ ‘ಮಾಸ್ಟರ್ ಮಿಕ್ಸ್ ಶೆಫ್ಟ್’ ಅಗ್ನಿಯಿಲ್ಲದೆ ಅಡುಗೆ ಸ್ಪರ್ಧೆ

ಪುತ್ತೂರು:ಇಲ್ಲಿನ ಸೈಂಟ್ ಪಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ…