ಶಿಕ್ಷಣ

ಆರ್ಥಿಕ ಸಾಕ್ಷರತೆ ಮಾಹಿತಿ ಕಾರ್ಯಾಗಾರ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ಷಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ‘ಎಲೈಟ್’ ಆಂತರಿಕ ವಿನ್ಯಾಸ ಸಂಘ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಆಂತರಿಕ ವಿನ್ಯಾಸ ವಿಭಾಗದ ವಿದ್ಯಾರ್ಥಿಗಳಿಗೆ “ಆರ್ಥಿಕ ಸಾಕ್ಷರತೆ” ವಿಷಯದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

Shani-pooja

ಸಂಪನ್ಮೂಲ ವ್ಯಕ್ತಿ ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಕಿಶೋರ್ ಕುಮಾರ್ ರೈ ಕೆ. ಕಾರ್ಯಕ್ರಮಕ್ಕೆ ಚಾಲನೆ  ನೀಡಿ, ಆರ್ಥಿಕ ಸಾಕ್ಷರತೆಯ ವ್ಯಾಪ್ತಿಗೆ ಬರುವ ಕೌಶಲ್ಯಗಳಲ್ಲಿ ಮನೆಯ ಬಜೆಟ್, ಸಾಲ ನಿರ್ವಹಣೆ, ಹಣಕಾಸು ಉತ್ಪನ್ನಗಳನ್ನು ಮೌಲ್ಯಮಾಪನ ಮಾಡುವುದು, ಹೂಡಿಕೆಗಳನ್ನು ಆಯ್ಕೆ ಮಾಡುವುದು ಸೇರಿದೆ ಎಂದರು.

ಆಂತರಿಕ ವಿನ್ಯಾಸ ವಿಭಾಗದ ಮುಖ್ಯಸ್ಥ ಹಾಗೂ ಕಾಲೇಜಿನ ಉಪಪ್ರಾಂಶುಪಾಲ ರಕ್ಷಣ ಟಿ.ಆರ್ ಅಧ್ಯಕ್ಷತೆ ವಹಿಸಿದ್ದರು.

ಉಪನ್ಯಾಸಕರಾದ ಕಾವ್ಯ ಹಾಗೂ ವಿಸ್ಮಯ ಉಪಸ್ಥಿತರಿದ್ದರು.

ಆಂತರಿಕ ವಿನ್ಯಾಸ ವಿಭಾಗದ ತೃತೀಯ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಎಲೈಟ್ ಸಂಘದ ಅಧ್ಯಕ್ಷ ವಿದ್ಯಾರ್ಥಿ ಸೃಜನ್ ಸ್ವಾಗತಿಸಿ,, ಪ್ರಥಮ ವಿಭಾಗದ ವಿದ್ಯಾರ್ಥಿನಿ ದುರ್ಗಲಕ್ಷ್ಮಿ ವಂದಿಸಿದರು. ತೃತೀಯ ವಿಭಾಗದ ಸ್ಫೂರ್ತಿ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ…